Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ವಡ್ಡರ್ಸೆ ರಘುರಾಮ‌ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ-ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು-webnews kannada

 

ಬ್ರಹ್ಮಾವರ ವಡ್ಡರ್ಸೆ ರಘುರಾಮ‌ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು -webnews kannada

ಕೋಟ: ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು ಹಾಗೂ ನೇರ ನಿಷ್ಠುರವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದರು. ಅವರು ಕೋಟ ಸಹಕಾರಿ ವ್ಯವಸಾಯಿಕ ಸಂಘದ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ.17ರಂದು ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

https://www.webnewskannada.com/
WEBNEWSKANNADA
WebNewsKannada​ | 

Updated on: nov 17, 2023

ಪತ್ರಕರ್ತನಾದವನಿಗೆ ಎಲ್ಲ ವಿಚಾರಗಳನ್ನು ತಿಳಿದುಕೊಳ್ಳುವ ಸದಭಿರುಚಿ ಇರಬೇಕು. ಆಗ ಮಾತ್ರ ಪರಿಪೂರ್ಣ ಕಾರ್ಯನಿವರ್ಹಣೆ ಸಾಧ್ಯ ಎಂದರು. ಪತ್ರಕರ್ತ ಜೋಗಿ ಅಭಿನಂದನಾ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶ್ವೇಶ್ವರ ಭಟ್ ಅವರ ಕೊಡುಗೆ ಅಪಾರವಾದದ್ದು. ಈ ಕ್ಷೇತ್ರಕ್ಕೆ ಹೊಸತನ ಹಾಗೂ ನವ ಆಯಾಮ ನೀಡಿದ ಸಾಧನೆ ಇವರಿಗೆ ಸಲ್ಲಬೇಕು ಎಂದರು.

ವಡ್ಡರ್ಸೆ ಸಾಧನೆ ಗುರುತಿಸಬೇಕು: ಪತ್ರಕರ್ತ ವಿಶ್ವೇಶ್ವರ ಭಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆ ರಘುರಾಮ ಶೆಟ್ಟರ ಕೊಡುಗೆ ಅದ್ಬುತವಾದದ್ದು. ಬ್ರಹ್ಮಾವರ ಪತ್ರಕರ್ತ ಸಂಘ ಅವರ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ನಮ್ಮ ಸರಕಾರ ವಡ್ಡರ್ಸೆ ಹೆಸರಲ್ಲಿ ಟಿ.ಎಸ್.ಆರ್. ಮಾದರಿಯ ಪ್ರಶಸ್ತಿ ನೀಡಬೇಕು ಎಂದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಹಿರಿಯ ಪತ್ರಕರ್ತ ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ

ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಕೋಟ ಶ್ರೀನಿವಾಸ ಪೂಜಾರಿ, ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ. ಸಮಿತಿಯ ಅಧ್ಯಕ್ಷ ಮಹಮ್ಮದ್ ಶರೀಫ್, ಬೈಂದೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್, ಹೆಬ್ರಿಯ ಸುಕುಮಾರ್ ಮುನಿಯಾಲು, ಕುಂದಾಪುರದ ನಾಗರಾಜ್ ರಾಯಪ್ಪನಮಠ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಪತ್ರಕರ್ತರಾದ ಶೇಖರ್ ಅಜೆಕಾರು ಮತ್ತು ಶಶಿಧರ ಹೆಮ್ಮಣ್ಣ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಶೇಖರ ಅಜೆಕಾರು ಕುಟುಂಬದವರಿಗೆ ಆರ್ಥಿಕ ಧನಸಹಾಯ ನೀಡಲಾಯಿತು. ಶಿವಾನಂದ ತಗಡೂರು ಮತ್ತು ಜೋಗಿ ಅವರನ್ನು ಗೌರವಿಸಲಾಯಿತು. ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಸಮಾರಂಭದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ‌ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಹರೀಶ ಕಿರಣ್ ಕುಮಾರ್ ತುಂಗ ವಂದಿಸಿದರು. ಸುರೇಶ್ ಕಾರ್ಕಡ ಮತ್ತು ತನುಷ ಅವರಿಂದ ಗಾನ ವೈಭವ ಜರಗಿತು.. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close