Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹುಣಸೆ ಬೀಜ ನುಂಗಿ 10 ವರ್ಷದ ಬಾಲಕ ಸಾವು webnews kannada

 

ಹುಣಸೆ ಬೀಜ ನುಂಗಿ 10 ವರ್ಷದ ಬಾಲಕ ಸಾವು webnews kannada

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಹುಣಸೆ ಹಣ್ಣು ಪುಟ್ಟ ಬಾಲಕ ಜೀವಕ್ಕೆ ಕಂಟಕವಾಗಿದೆ. ಬಾಲಕ ಹುಣಸೆಹಣ್ಣು ತಿನ್ನುತ್ತಿದ್ದ ವೇಳೆ ಅದರ ಬೀಜವನ್ನು ನುಂಗಿದ್ದಾನೆ. ಪರಿಣಾಮ ಹುಣಸೆ ಬೀಜ ಗಂಟಲಲ್ಲಿ ಸಿಲುಕಿದ್ದು, ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿದ್ದಾನೆ.

https://www.webnewskannada.com/
WEBNEWSKANNADA
WebNewsKannada​ | 

Updated on: nov 00, 2023

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮುಜಾಫರ್‌ಪುರದ ಸಕ್ರಾದ ಮಚ್ಚಿ ಗ್ರಾಮದ ರಾಜೇಶ್ ಮಹತೋ ಅವರ 10 ವರ್ಷದ ಮಗ ಆದರ್ಶ್ ಹುಣಸೆಹಣ್ಣು(Tamarind) ತಿಂದು ಸಾವನ್ನಪ್ಪಿದ್ದಾನೆ. ಆದರ್ಶ್ ಮೂರನೇ ತರಗತಿ ವಿದ್ಯಾರ್ಥಿ. ವರದಿಗಳ ಪ್ರಕಾರ, ಆದರ್ಶ್ ಶನಿವಾರ ಹುಣಸೆಹಣ್ಣು ತಿನ್ನುತ್ತಿದ್ದ ವೇಳೆ ಅದರ ಬೀಜವನ್ನು ನುಂಗಿದ್ದಾನೆ. ಪರಿಣಾಮ ಹುಣಸೆ ಬೀಜ(Tamarind Seeds) ಗಂಟಲಲ್ಲಿ ಸಿಲುಕಿದ್ದು, ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಬಾಲಕ ಉಸಿರಾಡಲು ಕಷ್ಟಪಡುತ್ತಿದ್ದಂತೆ ಪೋಷಕರಲ್ಲಿ ಸಹಜವಾಗಿ ಆತಂಕ ಹುಟ್ಟಿಕೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಬಾಲಕನ ಸ್ಥಿತಿ ಗಂಭೀರವಾಗಿದೆ. ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಮುಜಾಫರ್‌ಪುರಕ್ಕೆ ಕರೆದೊಯ್ಯಲಾಗಿದೆ. ಮುಜಾಫರ್‌ಪುರ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ನಡೆಸಿದಾಗ ಬಾಲಕನ ಶ್ವಾಸಕೋಶದಲ್ಲಿ ಹುಣಸೆ ಬೀಜಗಳು ಅಂಟಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಬಾಲಕನ ಪ್ರಾಣ ಉಳಿಸಲು ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದ ಕಾರಣ ವೈದ್ಯರ ಸಲಹೆಯಂತೆ ಕುಟುಂಬಸ್ಥರು ಪಾಟ್ನಾದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆತನ ಆಸ್ಪತ್ರೆ ತಲುಪುವ ಮಾರ್ಗಮಧ್ಯೆ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close