ಬೆಂಕಿ ಅವಘಡ- ಬಾರ್ ಮಾಲಕ ಸಾವು ,ಪತ್ನಿ ಗಂಭೀರ
ಉಡುಪಿಯ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೆಂಕಿ ಅವಘಡದಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮ ಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಈ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

