Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಉಡುಪಿ: ವೈದ್ಯರ ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಕರಣ ದಾಖಲು

 


ಉಡುಪಿ: ವೈದ್ಯರ ಕೋಮುಭಾವನೆ ಕೆರಳಿಸುವ ಪೋಸ್ಟ್,   ಪ್ರಕರಣ ದಾಖಲು

ಉಡುಪಿ, ಜುಲೈ 16: ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್‌ನಲ್ಲಿ ಮುಸ್ಲಿಮರ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಮಾಡಿದ ಆರೋಪದ ಮೇಲೆ ವೈದ್ಯರೊಬ್ಬರ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೀರ್ತನ್ ಉಪಾಧ್ಯ ಎಂಬವರು ಉಡುಪಿಯ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜುಲೈ 13 ರಂದು ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದ ಅವರು, ‘ನೀವು ಈ ಪ್ರಪಂಚದಿಂದ ಒಂದು ವಿಷಯವನ್ನು ತೆಗೆದುಹಾಕಲು ಸಾಧ್ಯವಾಗುವುದಾದರೆ ಅದು ಏನಾಗಬಹುದು? ಮುಸ್ಲಿಂ ಸಮುದಾಯ’ ಎಂದು ಉಲ್ಲೇಖಿಸಿದ್ದರು.ಪೋಸ್ಟ್ ವೈರಲ್ ಆದ ನಂತರ ಸಾರ್ವಜನಿಕರ ಆಕ್ರೊಶ ವ್ಯಕ್ತವಾಗಿತ್ತು. ನಂತರ ವೈದ್ಯರು ಅದನ್ನು ಅಳಿಸಿ ಹಾಕಿದ್ದರು. ಎಕ್ಸ್​ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದರು.ಪೋಸ್ಟ್ ವೈರಲ್ ಆದ ನಂತರ ಸಾರ್ವಜನಿಕರ ಆಕ್ರೊಶ ವ್ಯಕ್ತವಾಗಿತ್ತು. ನಂತರ ವೈದ್ಯರು ಅದನ್ನು ಅಳಿಸಿ ಹಾಕಿದ್ದರು. ಎಕ್ಸ್​ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದರು.

ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದ ವೈದ್ಯರು, ನಾನು ಕೆಲವು ತಿಂಗಳ ಹಿಂದೆ ಟ್ವಿಟರ್ ಬಳಸುವುದನ್ನು ನಿಲ್ಲಿಸಿದ್ದೆ. ನನ್ನ ಅರಿವಿಗೆ ಬಾರದೆ ಪೋಸ್ಟ್ ಮಾಡಲಾಗಿರುವುದು ಗೊತ್ತಾಯಿತು. ನನ್ನ ಖಾತೆಯನ್ನು ಯಾರೋ ಬಳಸುತ್ತಿದ್ದರು. ನಾನು ನನ್ನ ಪಾಸ್‌ವರ್ಡ್, ಲಾಗಿನ್ ವಿವರಗಳು ಮತ್ತು ಖಾತೆಗೆ ಸಂಬಂಧಿಸಿದ ಎಲ್ಲವನ್ನೂ ಬದಲಾಯಿಸಿದ್ದೇನೆ. ನನ್ನ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಈ ವಿಚಾರವಾಗಿ ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close