Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ

 


ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ

ಬಳ್ಳಾರಿ, ಜುಲೈ 22: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಯಾತ್ರಿಕರಿಗೆ ಇಬ್ಬರು ಜುಲೈ 18 ರಂದು ಇಸ್ಲಾಂ ಧರ್ಮದ ಬಗ್ಗೆ ಬೋಧನೆ ಮಾಡಿದ್ದಾರೆ ಎಂಬ ಆರೋಪವಿದೆ ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಇದೇ ವೇಳೆ, ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದವರಿಗೆ ಆರೋಪಿಗಳು ಇಸ್ಲಾಂ ಧರ್ಮದ ಬೋಧನೆ ಮಾಡಿದ್ದಾರೆ. ಈ ಬಗ್ಗೆ ಗಾದಿಲಿಂಗಪ್ಪ ಎಂಬವರು ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅನ್ಯ ಧರ್ಮದವರು ತಮ್ಮ ಗುರುಗಳ ಬಗ್ಗೆ ಭೋದನೆ ಮಾಡುತ್ತಿರುವ ದೃಶ್ಯವನ್ನು ಅವರು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅನ್ಯ ಧರ್ಮದವರು ಮಾತನಾಡಿದ ಬಳಿಕ ಯಾತ್ರಾತ್ರಿಗಳಿಗೆ ಬುದ್ಧಿ‌ಹೇಳಿದ ಗಾದಿಲಿಂಗಪ್ಪ, ಅವರ ಮಾತು ನಂಬಬೇಡಿ. ಅವರೆಲ್ಲ ಮತಾಂತರ ಮಾಡುತ್ತಾರೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.ಸದ್ಯ, ಮತಾಂತರ ಮಾಡಲು ಪ್ರಯತ್ನ ಮಾಡಿದ ಆರೋಪದಲ್ಲಿ ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಸೇನ್ ಭಾಷ ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ನಾಪತ್ತೆಯಾಗಿದ್ದಾನೆ. ವಿಡಿಯೋ ದಾಖಲೆ ಆಧಾರದ ಮೇಲೆ ಮತಾಂತರ ಯತ್ನ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close