Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Udupi barkur ಬಾರ್ಕೂರು ಶೌರ್ಯ ತಂಡದವರು, ಸ್ಥಳೀಯರ ಸಹಕಾರದೊಂದಿಗೆ ಸುರಿಯುತ್ತಿರುವ ಮಳೆಯ ನಡುವೆಯೇ ಮರಗಳನ್ನು ಕಡಿದು ತೆರವು News


ಬಾರ್ಕೂರು ಶೌರ್ಯ ತಂಡದವರು, ಸ್ಥಳೀಯರ ಸಹಕಾರದೊಂದಿಗೆ ಸುರಿಯುತ್ತಿರುವ ಮಳೆಯ ನಡುವೆಯೇ ಮರಗಳನ್ನು ಕಡಿದು ತೆರವು News


  | Updated By: webnewskannada  

ತೀವ್ರ ಗಾಳಿಗೆ ಬಾರ್ಕೂರು ಧರ್ಮಶಾಲೆ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದ ಸಮೀಪ ಬ್ರಹತ್ ಮರಗಳು  ಹಲವಾರು ವಿದ್ಯುತ್ ಕಂಬಕ್ಕೆ,ಹಾನಿಯಾಗಿ ರಸ್ತೆ ಸಂಚಾರಕ್ಕೆ, ತಡೆಯಾಗಿತ್ತು, ಅದೇ ರೀತಿ ಬಾರ್ಕೂರು ರೈಲು ನಿಲ್ದಾಣ ಸಂಪರ್ಕ ರಸ್ತೆ ರಂಗನಕೆರೆ , ಬಂಡೀಠ ,ಬಳಿ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು ತಕ್ಷಣ ಸ್ಥಳಕ್ಕೆ ಧಾವಿಸಿದ ಬಾರ್ಕೂರು ಶೌರ್ಯ ತಂಡದವರು,

ಸ್ಥಳೀಯರ ಸಹಕಾರದೊಂದಿಗೆ ಸುರಿಯುತ್ತಿರುವ ಮಳೆಯ ನಡುವೆಯೇ ಮರಗಳನ್ನು ಕಡಿದು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು ಈ ಕಾರ್ಯ ಚರಣಿಯಲ್ಲಿ ಸಹಕರಿಸಿದ ಬಾರ್ಕೂರು ಶೌರ್ಯ ತಂಡ ಮೆಸ್ಕಾಂ ಸಿಬ್ಬಂದಿ ವರ್ಗ ಅರಣ್ಯ ಇಲಾಖೆ ಸಿಬ್ಬಂದಿ ವರ್ಗ, 



ಸ್ಥಳೀಯ ರಿಕ್ಷಾ ಚಾಲಕರು, ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳು ಈ ಸಂದರ್ಭದಲ್ಲಿ ಹನೆಹಳ್ಳಿಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ರಮಾನಂದ್ ಶೆಟ್ಟಿ, ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀ ರವೀಂದ್ರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಘಟಕ ಸಂಯೋಜಕಿ ಶ್ರೀಮತಿ ಕುಸುಮ ಹೆಬ್ಬಾರ್, ಬ್ರಹ್ಮಾವರ ಮೆಸ್ಕಾಂ ಶಾಖೆ 1 ರ ಸೆಕ್ಷನ್ ಆಫೀಸರ್ ಶ್ರೀ ಉದಯಖಾರ್ವಿ ಉಪಸ್ಥಿತರಿದ್ದರು

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close