Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Udupi -ಹಾಲೆಮರವನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ- ಡಾ.ರಶ್ಮಿ ಅಮ್ಮೆಂಬಳ

webnews kannada

Udupi -ಹಾಲೆಮರವನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ- ಡಾ.ರಶ್ಮಿ ಅಮ್ಮೆಂಬಳ

 

ಉಡುಪಿ ಪಿತ್ರೋಡಿಯ ಮೊಗವೀರಹಿತ್ಲುವಿನ ಶ್ರೀ ದತ್ತಾತ್ರೇಯ ಭಜನಾ ಮಂಡಳಿ ಮತ್ತು ಶ್ರೀ ದತ್ತಾತ್ರೇಯ ಮಹಿಳಾ ಮಂಡಳಿಯವರು ಆಯೋಜಿಸಿದ 'ಆಟಿಡೊಂಜಿ ದಿನ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಮಣಿಪಾಲ ಮಾಹೆಯ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನ ರೇಡಿಯೊ ಮಣಿಪಾಲದಲ್ಲಿ ಸಹಾಯಕ ಪ್ರಾಧ್ಯಾಪಕರು, ಸಂಯೋಜಕರು ಮತ್ತು ಸಂಶೋಧಕರಾಗಿರುವ ಡಾ.ರಶ್ಮಿ ಅಮ್ಮೆಂಬಳ ಆಟಿ ತಿಂಗಳ ಆಚರಣಾ ವಿಧಾನಗಳ ಮಹತ್ವವನ್ನು ವಿವರಿಸಿ ವಿನಾಶದ ಅಂಚಿನಲ್ಲಿರುವ ಹಾಲೆಮರಗಳನ್ನು ಉಳಿಸಿಬೆಳೆಸಬೇಕಾದ ಅನಿವಾರ್ಯತೆಯಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಮಕ್ಕಳು ಪ್ರದರ್ಶಿಸಿದ ಆಟಿಕಳಂಜ‌ ಕುಣಿತ ನೆರೆದವರ ಗಮನ ಸೆಳೆಯಿತು. ಆಟಿತಿಂಗಳ ಮಹತ್ವವನ್ನು ಸಾರುವ ವಿವಿಧ ಭಕ್ಷ್ಯಗಳ ಭೋಜನ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ವೇದಿಕೆ ಯಲ್ಲಿ ಚೇತನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಬಿತಾ ಸುರೇಶ್,ರಾಜೇಶ್ ಕುಂದರ್, ಐತಪ್ಪ ಕೋಟ್ಯಾನ್ ಹಾಗೂ ಶ್ರೀ ದತ್ತಾತ್ರೇಯ ಮಹಿಳಾ ಮಂಡಳಿ ಅಧ್ಯಕ್ಷೆ ಹರಿಣಿ ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close