Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ತಾಲೂಕಿನ ಭಜನಾ ಮಂಡಳಿಗಳ 26 ವರ್ಷದ ವಚನ ಕಮ್ಮಟ ಇದರ ಪೂರ್ವಭಾವಿಯಾಗಿ ಸಮಾಲೋಚನ ಸಭೆ


ಬ್ರಹ್ಮಾವರ ತಾಲೂಕಿನ ಭಜನಾ ಮಂಡಳಿಗಳ 26 ವರ್ಷದ ವಚನ ಕಮ್ಮಟ ಇದರ ಪೂರ್ವಭಾವಿಯಾಗಿ ಸಮಾಲೋಚನ ಸಭೆ

webNews

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಬ್ರಹ್ಮಾವರ ತಾಲೂಕು. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಬ್ರಹ್ಮಾವರ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕಿನ ಭಜನಾ ಮಂಡಳಿಗಳ 26 ವರ್ಷದ ವಚನ ಕಮ್ಮಟ ಇದರ ಪೂರ್ವಭಾವಿಯಾಗಿ ಸಮಾಲೋಚನ ಸಭೆಯನ್ನು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು ರಾಷ್ಟ್ರೀಯ ಸ್ವಸಹಾಯ ಸಂಘಗಳ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಉಲ್ಲಾಸ್ ಮೇಸ್ತ ಇವರು 'ಭಜನೆಯು ಭಗವಂತನನ್ನು ತಲುಪಲು ಇರುವ ಮಾಧ್ಯಮವಾಗಿದ್ದು ಇದರಿಂದ ಸ್ವಸ್ಥ ಸಮಾಜ ನಿರ್ಮಾಣ ಮಾಡಬಹುದು. ಮಕ್ಕಳಿಗೆ ಚಿಕ್ಕಂದಿನಲ್ಲಿ ಸಂಸ್ಕೃತಿ , ಸಂಸ್ಕಾರ ಬೆಳೆಯಬೇಕಾದರೆ ಭಜನೆಯಿಂದ ಮಾತ್ರ ಸಾಧ್ಯ* *ಇಂದು ಬದಲಾಗುತ್ತಿರುವ ಸಮಾಜದಲ್ಲಿ ಪಾಶ್ಚಾತ್ಯ ಸಂಸ್ಕೃತಿಗಳು ನಮ್ಮ ಜೀವನದ ಅವಿಭಾಜ್ಯ ಅಂಗಗಳಾಗಿದ್ದು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಭಜನೆಯ ಮಹತ್ವವನ್ನು ತಿಳಿಸಿದಲ್ಲಿ ಮಾತ್ರ ನಮ್ಮ ಧರ್ಮ ಉಳಿಯಲು ಸಾಧ್ಯ ಎಂಬ ಸಂದೇಶವನ್ನು ತಿಳಿಸಿದರು ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿಕೆ ಇವರು ಮಾತನಾಡುತ್ತಾ, ಪೂಜ್ಯ ಡಾ.ಡಿ, ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿತ್ವದಿಂದ ಭಜನಾ ಪರಿಷತ್ತನ್ನು ರಚನೆ ಮಾಡಿದ್ದು ಇದರಿಂದ ಪ್ರತಿಯೊಂದು ಹಳ್ಳಿಹಳ್ಳಿಯಲ್ಲಿಯೂ ಧರ್ಮ ಜಾಗೃತಿ ಆಗಿರುತ್ತದೆ ಅಲ್ಲದೇ ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿ ಭಜನೆಯ ಮಹತ್ವವನ್ನು ಬೆಳೆಸಿದಲ್ಲಿ ದುಶ್ಚಟಗಳಿಂದ ಮುಕ್ತರಾಗುವಂತೆ ಮಾಡಬಹುದು ಈ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವವಾಗಿರುತ್ತದೆ ಉಡುಪಿ ಜಿಲ್ಲಾ ಭಜನಾ ಪರಿಷತ್ತಿನ ಸಮನ್ವಯ ಅಧಿಕಾರಿ ರಾಘವೇಂದ್ರ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು ಈ ಸಂದರ್ಭದಲ್ಲಿ ರಾಜ್ಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಜೇಂದ್ರ ಕುಮಾರ್ ಬಸ್ರೂರು ಇವರನ್ನು ಅಭಿನಂದಿಸಲಾಯಿತು ಹಾಗೂ ಬ್ರಹ್ಮಾವರ ತಾಲೂಕು ಭಜನಾ ಪರಿಷತ್ತಿನ ಗೌರವ ಸಲಹೆಗಾರರಾಗಿ ಆಯ್ಕೆಯಾದ ಹರೀಶ್ ಶಾನಭಾಗ್ ಕೊಕ್ಕರ್ಣೆ, ಸವಿತಾ ಎರ್ಮಾಳ್ , ಬಾಲಕೃಷ್ಣ ಶೆಟ್ಟಿ ಇವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಬ್ರಹ್ಮವರ ತಾಲ್ಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ಪ್ರಸನ್ನ, ಉಪಾಧ್ಯಕ್ಷರಾದ ರಾಘವೇಂದ್ರ ರಾವ್ ಬಾರ್ಕೂರು, ಕಾರ್ಯದರ್ಶಿ ಸುರೇಂದ್ರ ಶೆಟ್ಟಿ, ಕೋಶಾಧಿಕಾರಿ ಶಶಿಕಲಾ, ಉಪಸ್ಥಿತರಿದ್ದರು. ತಾಲೂಕಿನ ಭಜನಾ ಮಂಡಳಿಯ ಪದಾಧಿಕಾರಿಗಳು ವಲಯಗಳ ಮೇಲ್ವಿಚಾರಕರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಬಾರ್ಕೂರು ವಲಯದ ಮೇಲ್ವಿಚಾರಕರಾದ ರವೀಂದ್ರ ಎಸ್ ನಿರೂಪಿಸಿ ವಂದಿಸಿದರು ಮೇಲ್ವಿಚಾರಕಿ ನೇತ್ರಾವತಿ ಎಲ್ಲರನ್ನು ಸ್ವಾಗತಿಸಿದರು


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close