Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ನೀರಿನೊಳಗೆ ತ್ರಿವರ್ಣ ಧ್ವಜದ ಸುಂದರ ನೋಟ ನೋಟದ ವಿಡಿಯೋ

78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ನೀರಿನೊಳಗೆ ತ್ರಿವರ್ಣ ಧ್ವಜದ ಸುಂದರ ನೋಟದ ವಿಡಿಯೋ 

webNews

78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ನೀರಿನೊಳಗೆ ತ್ರಿವರ್ಣ ಧ್ವಜದ ಸುಂದರ ನೋಟ ಭಾರತವು ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗಿದೆ. ಎಲ್ಲೆಡೆ ತ್ರಿವರ್ಣ ರಂಗು ದೇಶವನ್ನು ಬೆಳಗುತ್ತಿದೆ, ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುತ್ತಾ, ದೇಶಕ್ಕಾಗಿ ಅವರು ಮಾಡಿದ ತ್ಯಾಗವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ದಿನವನ್ನು ಆಚರಿಸಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇನ್ನೂ ತ್ರಿವರ್ಣ ಧ್ವಜವನ್ನು ಹಾರಿಸಲು ಜನರಿಗೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಬಾರಿಯೂ ಕೂಡಾ ʼಹರ್‌ ಘರ್‌ ತಿರಂಗಾʼ ಅಭಿಯಾನವನ್ನು ನಡೆಸಲಾಗುತ್ತಿದೆ. ಇದೇ ವೇಳೆ ಸ್ವಾತಂತ್ರ್ಯ ದಿನವನ್ನು ಸ್ಮರಣೀಯವಾಗಿರಿಸಲು ಭಾರತೀಯ ಕರಾವಳಿ ಪಡೆ ಕೂಡಾ ಲಕ್ಷದ್ವೀಪದಲ್ಲಿ ಸಾಗರದಡಿಯಲ್ಲಿ ವಿಶೇಷ ರೀತಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಈ ರೋಮಾಂಚನಕಾರಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆಈ ಕುರಿತ ವಿಶೇಷ ಪೋಸ್ಟ್‌ ಒಂದನ್ನು ಭಾರತೀಯ ಕರಾವಳಿ ಪಡೆ (Indian Costal Guard) ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “78 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಹರ್‌ ಘರ್‌ ತಿರಂಗಾ ಅಭಿಯಾನದ ಭಾಗವಾಗಿ ಭಾರತೀಯ ಕರಾವಳಿ ಪಡೆ ಲಕ್ಷದ್ವೀಪದ ಶುದ್ಧ ನೀರಿನಡಿಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿತು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ. ವೈರಲ್‌ ವಿಡಿಯೋದಲ್ಲಿ ಭಾರತೀಯ ಕರಾವಳಿ ಪಡೆ ಲಕ್ಷದ್ವೀಪದಲ್ಲಿ ಶುದ್ಧ ನೀರಿನಡಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿರುವ ರೋಮಾಂಚನಕಾರಿ ದೃಶ್ಯವನ್ನು ಕಾಣಬಹುದು.




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close