ಶಿರಾಡಿ ಘಾಟ್ ಗುಡ್ಡ ಕುಸಿತ; ಸ್ಥಳಕ್ಕೆ ಸಿಎಂ ಭೇಟಿ
ಶಿರಾಡಿ ಘಾಟ್ ಗುಡ್ಡ ಕುಸಿತ; ಸ್ಥಳಕ್ಕೆ ಸಿಎಂ ಭೇಟಿ
ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ
ಇಂದು ಭೇಟಿ ನೀಡಿದ್ದರು. ಘಟನೆಯ ಭೀಕರತೆಗೆ ತಬ್ಬಿಬ್ಬಾದ
ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ
ಅಧಿಕಾರಿ ವಿಲಾಸ್ ಅವರಿಗೆ ಸಾಲುಸಾಲು ಪ್ರಶ್ನೆ ಕೇಳಿದ್ದಾರೆ.
ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ
ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ
ಕೂಡ ಪ್ರಮುಖ ಕಾರಣ ಎಂದರು. ರಸ್ತೆ ಕಾಮಗಾರಿ ಕುರಿತಂತೆ
ಸರ್ಕಾರದ ಸಿಎಸ್ ಶಾಲಿನಿ ರಜನೀಶ್, ಸಿಎಂಗೆ ವಿವರಣೆ
ನೀಡಿದರು.

