Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕುಂದಾಪ್ರ ಭಾಷೆ ಜನರ ಭಾವನೆಯ ನಾಡಿಮಿಡಿತ-ಶ್ರೀ ಜಯರಾಮ್ ಶೆಟ್ಟಿ


ಕುಂದಾಪ್ರ ಭಾಷೆ ಜನರ ಭಾವನೆಯ ನಾಡಿಮಿಡಿತ-ಶ್ರೀ ಜಯರಾಮ್ ಶೆಟ್ಟಿ

News

ಕೋಟ : ಕುಂದಾಪ್ರ ಭಾಷೆ ಕೇವಲ ಮಾತನಾಡುವ ಭಾಷೆಯಾಗಿ ಉಳಿಯದೇ ಜನರ ಭಾವನೆಯ ನಾಡಿಮಿಡಿತವಾಗಿದೆ. ಯಾವುದೇ ಸಂದರ್ಭದಲ್ಲಿ ಹಿಂಜರಿಕೆ ಪಡೆಯದೇ ಕುಂದಾಪ್ರ ಭಾಷೆಯನ್ನು ಬಳಸಬೇಕು. ಇಲ್ಲಿನ ಸಂಸ್ಕೃತಿಯ ವೈವಿಧ್ಯತೆಯ ಅನಾವರಣಕ್ಕೆ ವಿಶ್ವ ಕುಂದಾಪ್ರ ದಿನಚರಣೆ ಸಾಕ್ಷಿಯಾಗುತ್ತಿರುವುದು ಸಂತಸದ ವಿಷಯ ಎಂದು ಪ್ರಗತಿಪರ ಕೃಷಿಕ  ಜಯರಾಮ್ ಶೆಟ್ಟಿ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕುಂದಾಪ್ರ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಯು-ಚಾನೆಲ್ ಆಶ್ರಯದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸಾವ ಹೊಸ ಹೂಂಗು ಕೋಲೆ... ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. 


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ  ಕೆ ಸತೀಶ್ ಕುಂದರ್, ಸಾಂಸ್ಕೃತಿಕ ಚಿಂತಕ  ಪ್ರದೀಪ್ ಬಸ್ರೂರು, ಚಿತ್ರಕಲಾ ಶಿಕ್ಷಕ  ಗಿರೀಶ್ ಆಚಾರ್ಯ ವಕ್ವಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ  ಸತೀಶ್ ವಡ್ಡರ್ಸೆ ನಿರೂಪಿಸಿ ಪ್ರತಿಷ್ಠಾನದ ಕಾರ್ಯದರ್ಶಿ  ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿದರು. ಸಭಾ ಕಾರ್ಯಕ್ರಮದ ನಂತರ ಗಮ್ಜಾಲ್ ಹರಟೆ ತಂಡದವರಿoದ ಹರಟೆ, ಮಕ್ಕಳಿಂದ ನಮ್ಮ ಕುಂದಾಪ್ರ..ನಮ್ಮ ಸಂಪ್ರದಾಯ ದೃಶ್ಯ ಕಥನ ಹಾಗೂ ಕುಂದಾಪ್ರ ಕನ್ನಡ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು

ನೇರಪ್ರಸಾರಗಾಗಿ ಸಂಪರ್ಕಿಸಿ : 9483578321

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close