Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬೆಣ್ಣೆಕುದ್ರು ಶಿವ ಪೂಜಾರಿ ಅವರಿಂದ ಬಾರ್ಕೂರು ಸಂತೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆ ಹಸ್ತಾoತರ

ಬೆಣ್ಣೆಕುದ್ರು ಶಿವ ಪೂಜಾರಿ ಅವರಿಂದ ಬಾರ್ಕೂರು ಸಂತೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆ ಹಸ್ತಾoತರ


 

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯಾವಾಗಿ ತೊಡಿಸಿಕೊಂಡಿರುವ ಬೆಣ್ಣೆ ಕುದ್ರು ಶಿವ ಪೂಜಾರಿಯವರು ಇಂದು ತಾನು ಕಲಿತ ಶಾಲೆಗೆ ತನ್ನಿಂದ ಏನಾದರೂ ಕಿಂಚಿತ್ತು ಸಹಾಯವಾಗಬೇಕೆಂಬ ಸದುದ್ದೇಶದಿಂದ ಶಾಲೆಗೆ ಬಿಸಿ ಊಟ ತಯಾರಿಸಲು ಅತೀ ಅಗತ್ಯವಿದ್ದ ಗ್ಯಾಸ್  ಸ್ಟವ್ ಹಾಗೂ ಕುಕ್ಕರನ್ನು ಶಾಲಾ ಮುಖ್ಯ ಶಿಕ್ಷಕಿಯಾದ ಶಾರದ ಕುಮಾರಿ ಅವರಿಗೆ ಹಸ್ತಾಂತರಿಸಿದರು


ಈ ಸಂದರ್ಭದಲ್ಲಿ ಭಾಸ್ಕರ್ ನಾಯಕ್ ಬಾರ್ಕೂರು (ನಿವೃತ್ತ ಗುಮಾಸ್ತರು ಮಾಹೆ ಶಿಕ್ಷಣ ಸಂಸ್ಥೆ),  ಗಣೇಶ್ ಪೂಜಾರಿ ಹೊಸಾಳ,  ಆನಂದ್ ಬಾರ್ಕೂರು, ಶಿಕ್ಷಕಿಯರಾದ ಶೈಲಜಾ, ಶೋಭಾ,ದಿವ್ಯ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಪ್ರಸ್ತಾವಿಕವಾಗಿ ಮಾತನಾಡಿದ ಮುಖ್ಯ ಶಿಕ್ಷಕಿ ಶಾರದ ಕುಮಾರಿ ಅವರು

ಈ ಹಿಂದೆಯೂ ಕೂಡ  ನಮ್ಮ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ  ಶಿವ ಪೂಜಾರಿಯವರು

 ನಮ್ಮ  ಶಾಲೆಗೆ ತಮ್ಮಿಂದಾದ ಸಹಾಯ ಮಾಡುತ್ತಾ ಬಂದಿದ್ದಾರೆ ಅವರ  ಸಮಾಜ ಸೇವೆ ಹೀಗೆ ನಿರಂತರ ಮುಂದುವರೆಯಲಿ ಎಂದು ಕೃತಜ್ಞತೆ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಶಿವ ಪೂಜಾರಿಯವರು ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಅವರಿಗೆ ಉತ್ತಮ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಸಮಾಜದಲ್ಲಿ ಒಳ್ಳೆ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ ಎಂದು ತಿಳಿಸಿದರು

ಶಿಕ್ಷಕಿ ಶೈಲಜಾ ಅವರು ಧನ್ಯವಾದ ಸಮರ್ಪಿಸಿದರು 

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close