Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ

ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ

ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಅಂದರೆ ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. .



ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ ಬೆಸ್ಕಾಂ, ಸಹಾಯವಾಣಿ ಬಿಡುಗಡೆ

ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ ಮಾರ್ಗಸೂಚಿಗಳು ಹೀಗಿವೆ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ ಹಾಕುವಾಗ ವಿದ್ಯುತ್ ತಂತಿಗಳ ಬಗ್ಗೆ ಎಚ್ಚರವಹಿಸಬೇಕು. ಸೀರಿಯಲ್ ಲೈಟ್ ತಂತಿ ಸಮರ್ಪಕ ಇನ್ಸುಲೇಟ್ ಆಗಿರಬೇಕು. ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯಬಾರದು. ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರ್ದು. ಮೆರವಣಿಗೆ ವೇಳೆ ರಸ್ತೆ ಬದಿ ವಿದ್ಯುತ್‌ ತಂತಿಗಳನ್ನು ಮೇಲಕ್ಕೆತ್ತಲು ಪ್ರಯತ್ನಿಸಬೇಡಿ. ಮೆರವಣಿಗೆ ಮಾರ್ಗವನ್ನ ಮುಂಚಿತ ಎಸಿ ಗಮನಕ್ಕೆ ತನ್ನಿ. ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ವಿದ್ಯುತ್ ಪರಿಕರಗಳಿರುವ ಸ್ಥಳಗಳಲ್ಲಿ ‘ಡೇಂಜರ್ ಜೋನ್’ ಎಂದು ಸೂಚಿಸಬೇಕು ಅಂತಾ ಬೆಸ್ಕಾಂ ಹೇಳಿದೆ. :

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close