Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗದಿಂದ ಸಂಭ್ರಮದ ಎಲೆವೆಂಶಿಯಾ 2ಕೆ24 ಫೆಸ್ಟ್ webnewskannada

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗದಿಂದ ಸಂಭ್ರಮದ  ಎಲೆವೆಂಶಿಯಾ 2ಕೆ24 ಫೆಸ್ಟ್ webnewskannada


ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ  ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ರೋಬೊಸಾಫ್ಟ್  ಉಡುಪಿ ಮತ್ತು ಸಮಾಜ ಸೇವಕ ಈಶ್ವರ್ ಮಲ್ಪೆ ಇವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಜೊತೆ ಮಾತನಾಡಿ ಬಿ.ಸಿ.ಎ ವಿಭಾಗದಲ್ಲಿರುವ ಅವಕಾಶಗಳು ಹಾಗೂ ಹೊಸ ರೀತಿಯ ಪ್ರೋಗ್ರಾಮ್ ಗಳನ್ನು ನಡೆಸುವ ಕುರಿತು ವೈಯಕ್ತಿಕ ಸಾಧನೆಯನ್ನು ಸಾಧಿಸುವ ಕುರಿತಾಗಿ ಮತ್ತು ವಿಭಾಗದ ಪ್ರಾಮುಖ್ಯತೆಯ ಕುರಿತು ಶ್ರೀಮತಿ ಲಕ್ಷ್ಮೀ ಶೆಟ್ಟಿ ಮಾಹಿತಿ ನೀಡಿದರು. ಈಶ್ವರ್ ಮಲ್ಪೆ  ಅವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಿಗುವ ಅವಕಾಶಕ್ಕೆ ಹೊಂದಿಕೊಂಡು ಉತ್ತಮವಾದಂತಹ ವಿದ್ಯೆಯನ್ನು ಪಡೆದು ಸಮಾಜಮುಖಿಯಾಗಿರುವಂತ ಕೆಲಸದಲ್ಲಿ ನಮ್ಮನ್ನು ತೊಡಗಿಸ ಕೊಳ್ಳಬೇಕೆಂದು ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ  ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಶ್ರೀಮತಿ ಅನಿತಾ,  ವಿಭಾಗದ ವಿದ್ಯಾರ್ಥಿ ನಾಯಕನಾದ ಜೀವನ್ ಖಾರ್ವಿ, ಉಪನಾಯಕಿ  ಮಧುಶ್ರೀ , ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶಿಝಾ ಸ್ವಾಗತಿಸಿ, ವಿದ್ಯಾರ್ಥಿನಿ ಶ್ರೀರಕ್ಷಾ ವಂದಿಸಿ, ಅಂಕಿತಾ ಮತ್ತು ಸಾಹುಲ್ ಅತಿಥಿಗಳನ್ನು ಪರಿಚಯಿಸಿ ,ವಿದ್ಯಾರ್ಥಿನಿ ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close