Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನ.30 ಕೊನೆಯ ದಿನ.(manipala arogya card)ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆಗೆ-webnews kannada

ನ.30 ಕೊನೆಯ ದಿನ.ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆಗೆ

Webnews kannada- ಮಣಿಪಾಲ, ನ.25: manipala arogya card ಮಣಿಪಾಲ ಆರೋಗ್ಯಕಾರ್ಡ್ ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. (manipala arogya card)ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು.

ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ, ಹೊರರೋಗಿ ಕಾರ್ಯ ವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.(manipala arogya card)ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ700 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600, ಕುಟುಂಬಕ್ಕೆ ₹ 950 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100 ಆಗಿರುತ್ತದೆ.

ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ಐದು ದಿನ ಬಾಕಿ ಇದ್ದು ನ. 30ಕ್ಕೆ ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮಾಹಿತಿ ಇಷ್ಟ ಆದರೆ ಈ ಸುದ್ದಿಯನ್ನು ನಿಮ್ಮವರೊಂದಿಗೆ ಶೇರ್ ಮಾಡಿ


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close