Karnataka Rains:ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ-webnewskannada
WEBNEWS KANNADA
Karnataka Rains:ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
![]() |
| ಸಾಂದರ್ಭಿಕ ಚಿತ್ರ |
ಈಗಾಗಲೇ ಬೆಂಗಳೂರು ನಗರ, ಬೆಂಗಳೂರು
ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮಂಡ್ಯ,
ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ,
ಹಾಸನ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ್,
ಹಾವೇರಿ, ಕಲಬುರಗಿ, ದಾವಣಗೆರೆ, ಚಿಕ್ಕಬಳ್ಳಾಪುರ,
ಕೋಲಾರ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಬಹುತೇಕ
ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.ಈಗಾಗಲೇ ಮಳೆಗೆ
ನದಿಗಳು, ಕೆರೆ ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿವೆ.
ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆ ಅತೀ ವೃಷ್ಟಿ
ಉಂಟಾಗಿತ್ತು. ಬೆಳೆಗಳು ನಾಶವಾಗಿದ್ದವು. ಇದೀಗ ಮತ್ತೆ
ಮಳೆ ಅಬ್ಬರಿಸಲು ಸಜ್ಜಾಗಿದೆ. ಮುಂದಿನ ಮೂರು ದಿನ ಈ ಕೆಳಗಿನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಭಾರೀ ಮಳೆ ಆಗಲಿದೆ. ಕನಿಷ್ಠ 70 ರಿಂದ ಗರಿಷ್ಠ 110 ಮಿಲಿ ಮೀಟರ್ ಮಳೆ ಆಗುವ ಕಾರಣ ಹಿನ್ನೆಲೆ ಈ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ನವೆಂಬರ್ 16ರ ನಂತರ ಈ ಪ್ರದೇಶಗಳಲ್ಲಿ ಅಧಿಕ ತಾಪಮಾನ, ಒಣಹವೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಚಳಿ, ಶೀಘ್ರವೇ ಭಾರಿ ಮಳೆ ಇದೇ ವೇಳೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆ ಸೇರಿ ವಿವಿಧ ಕಡೆಗಳಲ್ಲಿ ಲಘು ಮಳೆ ಆಗಲಿದೆ
.jpeg)
