Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬೈಕ್ ಸವಾರರಿಗೆ ಇನ್ನಷ್ಟು ಕಠಿಣ ರೂಲ್ಸ್-webnewskannada

ಬೈಕ್ ಸವಾರರಿಗೆ ಇನ್ನಷ್ಟು ಕಠಿಣ ರೂಲ್ಸ್

ಬೈಕ್ ಸವಾರರಿಗೆ ಇನ್ನಷ್ಟು ಕಠಿಣ ರೂಲ್ಸ್ ರಾಯಚೂರು, ನವೆಂಬರ್ 8: ಗಡಿ ಜಿಲ್ಲೆ ರಾಯಚೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಮಿತಿ ಮೀರಿದೆ. ಜಿಲ್ಲಾ ಪೊಲೀಸರು ಎಷ್ಟೇ ಹರಸಾಹಸ ಪಟ್ಟರೂ, ಏನೇ ಕಠಿಣ ನಿಯಮಗಳನ್ನು ಜಾರಿಗೆ ತಂದರೂ ವಾಹನ ಸವಾರರು ಮಾತ್ರ ಬೇಜವಾಬ್ದಾರಿತನ ಬಿಡುತ್ತಿಲ್ಲ.

ಸಾಂದರ್ಭಿಕ ಚಿತ್ರ 

ಅತೀ ವೇಗದ ಚಾಲನೆ, ರಸ್ತೆ ನಿಯಮಗಳ ಅರಿವು ಇಲ್ಲದಿರುವುದು, ಬೇಕಾಬಿಟ್ಟಿ ವಾಹನ ಚಾಲನೆ, ಅವೈಜ್ಞಾನಿಕ ರಸ್ತೆಗಳು ಸೇರಿ ವಿವಿಧ ಕಾರಣಗಳಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯಲ್ಲಿ ಕಳೆದ ಮೂರು ವರ್ಷದ ಅವಧಿಯಲ್ಲಿ ರಸ್ತೆ ಅಪಘಾತಗಳಲ್ಲಿ 1184 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2021ರಲ್ಲಿ ಗರಿಷ್ಠ, ಅಂದರೆ 335 ಮಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವರ್ಷ 10 ತಿಂಗಳಲ್ಲೇ 240 ಜೀವ ಬಿಟ್ಟಿದ್ದಾರೆ. ಸಂಚಾರ ನಿಯಮಗಳ ಉಲ್ಲಂಘನೆಯಲ್ಲಿ ರಾಯಚೂರು ಜಿಲ್ಲೆ ಮುಂಚೂಣಿಯಲ್ಲಿರುವುದು ಇಲಾಖೆಯ ಅಂಕಿಅಂಶಗಳಿಂದಲೇ ಬಹಿರಂಗವಾಗಿದೆ. ದೇವದುರ್ಗ, ಸಿಂಧನೂರು ಹಾಗೂ ಲಿಂಗಸುಗೂರು ತಾಲ್ಲೂಕಿನಲ್ಲಿ ಬಹುತೇಕ ವಾಹನಗಳಿಗೆ ನಂಬ‌ರ್ ಪ್ಲೇಟ್‌ಗಳೇ ಇಲ್ಲ. ಮರಳು ಸಾಗಿಸುವ ನೂರಾರು ವಾಹನಗಳಿಗೆ ನಂಬ‌ರ್ ಪ್ಲೇಟ್ ಇಲ್ಲ. ವಿವಿಧ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯ ಕೂಡ ಇದರಲ್ಲಿ ಎದ್ದು ಕಾಣುತ್ತಿದೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರ ಪೈಕಿ ಬೈಕ್ ಸವಾರರೇ ಹೆಚ್ಚಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಜಿಲ್ಲಾಡಳಿತ ಆದೇಶಿಸಿದೆ. ಈ ವಿಚಾರವಾಗಿ ರಾಯಚೂರು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನವೆಂಬರ್ ಒಂದರಿಂದ ಹೆಲ್ಮೆಟ್ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಹಾಕಲೇಬೇಕು. ಇಲ್ಲದಿದ್ದರೆ 500 ರೂ. ದಂಡ ತೆರಬೇಕು. ಈಗಾಗಲೇ ಗ್ರಾಮ ಸಭೆ ಹಾಗೂ ಜಾಹೀರಾತುಗಳ ಮೂಲಕ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಇಲಾಖೆ ಜನರ ಪ್ರಾಣದ ರಕ್ಷಣೆಗಾಗಿ ಈ ನಿಯಮ ತಂದರೂ ಕೂಡ ಜನ ಮಾತ್ರ ಹೆಲ್ಮೆಟ್ ಧರಿಸದೇ ಕದ್ದು ಮುಚ್ಚಿ ಓಡಾಡುತ್ತಿದ್ದಾರೆ. ತೀವ್ರಗೊಂಡ ಪೊಲೀಸ್ ತಪಾಸಣೆ ಅಲ್ಲಲ್ಲಿ ಪಾಯಿಂಟ್ಗಳಲ್ಲಿ ಪೊಲೀಸರು ಹೆಲ್ಮೆಟ್ ಚೆಕ್ಕಿಂಗ್ ನಡೆಸುತ್ತಿದ್ದಾರೆ. ಆದರೂ ಅವರ ಕಣ್ತಪ್ಪಿಸಿ ವಾಹನ ಸವಾರರು ಬೈಕ್ ಸಮೇತ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ರಾಯಚೂರಿನ ವಿವಿಧೆಡೆ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಎಸ್ಕೇಪ್ ಆಗ್ತಿರುವ ದೃಶ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. :

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close