Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ಯೂರಿಟಿ ಇಲ್ಲದೆ ಸಾಲ ಕೊಡ್ತೀವಿ ಅಂದ್ರೆ ಯಾರಾದರೂ ಇದನ್ನು ಓದಿ-‍webnewskannada

ಶ್ಯೂರಿಟಿ ಇಲ್ಲದೆ ಸಾಲ ಕೊಡ್ತೀವಿ ಅಂದ್ರೆ ಯಾರಾದರೂ ಇದನ್ನು ಓದಿ

ಶ್ಯೂರಿಟಿ ಇಲ್ಲದೆ ಸಾಲ ಕೊಡುತ್ತೇವೆ ಎಂಬ ಮಾತನ್ನು ನಂಬಿ 2 ಸಾವಿರ ಮಂದಿ ಮೋಸ ಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್ಚಾಗಿ ವಿದ್ಯಾವಂತರೇ ವಾಸಿಸುವ ಮಾಯಾ ನಗರಿಯಲ್ಲಿ ಇಷ್ಟೆಲ್ಲಾ ಮಂದಿ ವಂಚಕ ಮಾತಿಗೆ ಮರುಳಾಗಿದ್ದಾರೆ. ಆನಂದ್, ರೇಷ್ಮಾ, ಅಂಜುಂ, ಆನಿಯಾ ಎಂಬುವವರ ವಿರುದ್ಧ ದೂರು ದಾಖಲಿಸಲಾಗಿದೆ. ಸಾಲ ಕೊಡಿಸುವುದಾಗಿ ಹೇಳಿ 2ಸಾವಿರಕ್ಕೂ ಹೆಚ್ಚು ಮಂದಿಗೆ ಮೋಸ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಹೈಗ್ರೌಂಡ್ಸ್ ಪೊಲೀಸರು ರೇಷ್ಮಾ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀಕಾರ ಕೋ-ಆಪರೇಟಿವ್ ಸೊಸೈಟಿ ಲೋನ್ ಹೆಸರಲ್ಲಿ ವಂಚನೆ ಮಾಡಿದ್ದಾರೆ. 1 ಲಕ್ಷದಿಂದ 25ಲಕ್ಷದವರೆಗೂ ಸಾಲ ಕೊಡುವುದಾಗಿ ಹೇಳಿಕೆ ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ. ಸಾರ್ವಜನಿಕರಿಗೆ ಲೋನ್ ಕೊಡಿಸಲಿಕ್ಕೆ ಪ್ರೊಸೆಸಿಂಗ್ ಫೀಜ್ ಹಾಗೂ ಅಕೌಂಟ್ ಓಪನಿಂಗ್ ಫೀಜ್ ಹೆಸರಲ್ಲಿ ಸಾವಿರಾರು ರೂ. ಪಡೆದಿದ್ದಾರೆ ಎನ್ನುವ ಆರೋಪವಿದೆ. 15 ದಿನಗಳೊಳಗಾಗಿ ಸಾಲ ಕೊಡುತ್ತೇವೆ ಎಂದು ಹೇಳಿದ್ದರು, ಸಾಲಕ್ಕಾಗಿ ಮನವಿ ಮಾಡಿದ್ದ ಸಾರ್ವಜನಿಕರ ಮೊಬೈಲ್​ ನಂಬರ್​ ಅನ್ನೇ ಲೋನ್ ಅಕೌಂಟ್ ನಂಬರ್ ಎಂದು ಆರೋಪಿಗಳು ನೀಡಿದ್ದಾರೆ.2 ಸಾವಿರಕ್ಕೂ ಹೆಚ್ಚು ಮಂದಿಯಿಂದ ಕೋಟ್ಯಂತರ ಹಣವನ್ನು ವಸೂಲಿ ಮಾಡಿದ್ದಾರೆ. ಹಣ ವಾಪಸ್ ಕೇಳಿದರೆ ಪ್ರಭಾವಿಗಳ ಹೆಸರು ಹೇಳಿ ಧಮ್ಕಿ ಹಾಕಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.:

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close