Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Cyclone Fengal: ಚಂಡಮಾರುತ ಅಬ್ಬರ ಇನ್ನೆಷ್ಟು ದಿನ ಇದೆ?

Cyclone Fengal: ಚಂಡಮಾರುತ ಅಬ್ಬರ ಇನ್ನೆಷ್ಟು ದಿನ ಇದೆ?      


ಬಂಗಾಳಕೊಲ್ಲಿ ನೈಋತ್ಯ ಭಾಗದಿಂದ ವೇಗವಾಗಿ ಬಂದ ಚಂಡಮಾರುತ 'ಫೆಂಗಲ್' ಕರಾವಳಿ ಜಿಲ್ಲೆಗಳನ್ನು ತಲ್ಲಣಗೊಳಿಸಿದೆ. ಇನ್ನಿಲ್ಲದಂತೆ ಸರ್ಕಾರ, ಜನರನ್ನು ಕಾಡಿದ್ದು, ಭಾರೀ ಮಳೆ ಸುರಿಸುತ್ತಿದೆ ಚಂಡಮಾರುತವು ಶನಿವಾರ ಪುದುಚೇರಿ ಕರಾವಳಿ ಭಾಗಕ್ಕೆ ಅಪ್ಪಳಿಸುತ್ತಿದ್ದಂತೆ ವೇಗ ಕಡಿಮೆ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಪೂರ್ಣ ಪ್ರಮಾಣದಲ್ಲಿ ಇಳಿಕೆ ಕಂಡಿಲ್ಲ. ಡಿಸೆಂಬರ್ 02 ರಂದು ಸೋಮವಾರ ತಮಿಳುನಾಡು ಭಾಗದಲ್ಲಿ ಹಾಗೂ ಸಮುದ್ರ ಮಟ್ಟದಲ್ಲಿ ಸೈಕ್ಲೋನ್ ಪ್ರಭಾವ ಮುಂದುವರಿದಿದೆ. ಪರಿಣಾಮ ಚೆನ್ನೈ, ತಮಿಳುನಾಡು ಹಾಗೂ ಕರ್ನಾಟಕದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ ಡಿಸೆಂಬರ್ 3ರಂದು ಮಂಗಳವಾರ ಸಹ ಈ ಕಡಿಮೆ ಒತ್ತಡದ ಪ್ರದೇಶವು (ಫೆಂಗಲ್ ಚಂಡಮಾರುತ) ಆಗ್ನೇಯ ದಿಕ್ಕಿನತ್ತ ಜೋರಾಗಿ ಬೀಸುವ ಸಾಧ್ಯತೆ ಇದೆ. ಉತ್ತರ ಕೇರಳ-ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮಾರ್ಗವಾಗಿ ಸಾಗುವ ನಿರೀಕ್ಷೆ ಇದೆ. ಅಲ್ಲಿಯವರೆಗೆ ವಿವಿಧೆಡೆ ಭಾರೀ ಮಳೆಯ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಈವರೆಗೆ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ದಕ್ಷಿಣ ಒಳನಾಡಿಗೆ ಮಾತ್ರ ಭಾರೀ ಮಳೆಯ ಆತಂಕವಿತ್ತು. ಆದರೆ ಫೆಂಗಲ್ ಪೂರ್ವ ಅರಬ್ಬಿ ಸಮುದ್ರದತ್ತ ಸಾಗಿದರೆ, ಕರ್ನಾಟಕ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಿಗೂ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close