ಮುಂಬೈ: ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ವಿಮಾನದ ಪೈಲಟ್, ವಿಮಾನ ಹಾರಾಟ ಆರಂಭಿಸುವ ಮುನ್ನ ಕುಸಿದು ಬಿದ್ದಿದ್ದಾರೆ. ವಿಮಾನಯಾನ ಸಂಸ್ಥೆಯು ಬೇರೊಬ್ಬ ಪೈಲಟ್‌ಅನ್ನು ಕರೆಸಿ ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. 'ಜುಲೈ 4ರ ಮುಂಜಾನೆ ನಮ್ಮ ಪೈಲಟ್‌ಗಳಲ್ಲಿ ಒಬ್ಬರಿಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾಗಿತ್ತು. ಇದರಿಂದ ಬೆಂಗಳೂರಿನಿಂದ ದೆಹಲಿಗೆ (ಎಐ-2414) ವಿಮಾನದ ಹಾರಾಟ ನಡೆಸಲು ಆಗಲಿಲ್ಲ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು' ಎಂದು ಏರ್ ಇಂಡಿಯಾ ಪ್ರಕಟಣೆ ತಿಳಿಸಿದೆ. 'ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ' ಎಂದು ಹೇಳಿದೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.