ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಅವರು ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಇಂದು ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಅವರ ಶವ ಪತ್ತೆಯಾಗಿದೆ.ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ರೆ ಬಟ್ಟೆ ಪರ್ಸ್ ಮತ್ತೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು. ಇಂದು ಚಿಕ್ಕಮಗಳೂರು, ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.
Webnews kannada
Webnews kannada 2
Webnews kannada-3
WebNews kannada- 4
ಒಳ ಪೋಸ್ಟ್ -5
Popular Posts
ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-karavalivani
11 ಜುಲೈ, 2022
ಅಮ್ಮನ ಅನಾರೋಗ್ಯ. ಆರ್ಥಿಕ ಸಹಾಯ ಮಾಡುವಂತೆ ಮಗನ ಮನವಿ
10 ಆಗ, 2022
ಕೋಟ ಠಾಣೆಗೆ ನೂತನ ಪಿ ಎಸ್ ಐ ಮಧು.ಬಿ-karavalivani
8 ಜನ, 2022

