ಕೊಲೆ ಪ್ರಕರಣ: ಆರೋಪಿಗೂ ನನಗೂ ಸಂಬಂಧವಿಲ್ಲ ಎಂದ ಶಾಸಕ
ಕೊಲೆ ಪ್ರಕರಣ: ಆರೋಪಿಗೂ ನನಗೂ ಸಂಬಂಧವಿಲ್ಲ ಎಂದ ಶಾಸಕ
ಕೊಲೆ ಪ್ರಕರಣ: ಆರೋಪಿಗೂ ನನಗೂ ಸಂಬಂಧವಿಲ್ಲ ಎಂದ ಶಾಸಕ
ರೌಡಿಶೀಟರ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಪೋಲಿಸರು ಬಂಧಿಸಿರುವ ಅನಿಲ್ಗೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಬೈರತಿ ಬಸವರಾಜ್ ಹೇಳಿದ್ದಾರೆ. ಪೋಲಿಸರಿಂದ ಬಂಧನಕ್ಕೊಳಗಾಗಿರುವ ಅನಿಲ್, ನನ್ನ ಸಹೋದರ ಮಗನೆಂದು ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ದೂರವಾದ ಮಾತು. ಆತ ಯಾರೆಂಬುದೇ ನಮಗೆ ತಿಳಿದಿಲ್ಲ. ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ದೇಶದ ಕಾನೂನಿಗೆ ತಲೆಬಾಗುತ್ತೇನೆ ಎಂದು ಅವರು ಹೇಳಿದ್ದಾರೆ