Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭ ವೀರು ಶೆಟ್ಟಿ, ಧರ್ಮಸ್ಥಳ - webnews kannada

 

ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭ ವೀರು ಶೆಟ್ಟಿ, ಧರ್ಮಸ್ಥಳ - webnews kannada

ಉಜಿರೆ :  ಜೀವನದಲ್ಲಿ ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭವಾಗುತ್ತದೆ.

By Webnewskannada



ಉಜಿರೆ :  ಜೀವನದಲ್ಲಿ ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭವಾಗುತ್ತದೆ. ನೀರಲ್ಲದರೂ ಹಾಕು, ಹಾಲಲ್ಲಾದರೂ  ಹಾಕು ಎನ್ನುವ ಹಾಗೇ ನೀರಲ್ಲಿ ಮೀನನಾಗಿ, ಹಾಲಿನಲ್ಲಿ ಕೆನೆಯಾಗಿ ಬದುಕುಬೇಕು ಇದೇ ರೀತಿಯಲ್ಲಿ ನಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು. ಇಂದು ಪುರುಷ-ಮಹಿಳೆಯರು ಸಮಾನವಾಗಿ ವೃತ್ತಿಯಾಗಿ ನಡೆಸುತ್ತಿದ್ದಾರೆ. ಕಲಿಕೆ ಅನ್ನುವುದು ನಿರಂತರವಾಗಿ ಇರುವುದು ಅದನ್ನು ನಾವು ಅನುಸರಿಸಬೇಕು. ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ  ಪ್ರತಿಯೊಬ್ಬರು ವೃತ್ತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ  ಯಶಸ್ಸು ಕಾಣಬಹುದು ಜೊತೆಗೆ ಬಹುಮುಖ್ಯವಾಗಿ ದುರಭ್ಯಾಸಗಳಿಂದ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಆಳವಡಿಸಿಕೊಂಡು ವೃತ್ತಿಯಲ್ಲಿ ಮುನ್ನಡೇರಿ. ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ಉಚಿತ  ತರಬೇತಿ ನೀಡಿ ಯುವಜನರಿಗೆ ಅನುಕೂಲ ಮಾಡಿದ್ದಾರೆ. ಇದು ಪ್ರಪಂಚಕ್ಕೆ ಮಾದರಿಯಾಗಿದೆ. ಎಂದು  *ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ತನ ಟ್ರಸ್ಟ್ ಕಾರ್ಯದರ್ಶಿಗಳಾದ ಶ್ರೀ ವೀರು ಶೆಟ್ಟಿ* ಅಭಿಪ್ರಾಯಪಟ್ಟರು.


ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ * ಮೆನ್ಸ್ ಪಾರ್ಲರ್ ಸೆಲೂನ್  ಉದ್ಯಮಿ  ತರಬೇತಿಯ  ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ  ವಿತ್ತರಿಸಿ ಮಾತನಾಡಿದರು.ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು  ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು  ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ *ಶ್ರೀ ಬಿ.ಪಿ.ವಿಜಯ ಕುಮಾರ್* ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ,ಶ್ರೀ *ಲೋಕೇಶ್* ಮತ್ತು  ಶ್ರೀ *ರವಿ ಕುಮಾರ್ ಕಡೂರು*, ಉಪಸ್ಥಿತರಿದ್ದರು


ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ *ನಿರ್ದೇಶಕರಾದ ಶ್ರೀ ಅಜೇಯ*  ಅವರು ಸ್ವಾಗತಿಸಿದರು. ಸಂಸ್ಥೆಯ *ಹಿರಿಯ ಉಪನ್ಯಾಸಕರಾದ *ಅಬ್ರಹಾಂ ಜೇಮ್ಸ್*  ಕಾರ್ಯಕ್ರಮ ನಿರೂಪಿಸಿದರು *ಉಪನ್ಯಾಸಕರಾದ *ಕೆ.ಕರುಣಾಕರ ಜೈನ್* ವಂದಿಸಿದರು. ಸುಮಾರು 35 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಮಂಜುನಾಥ, ಪ್ರಕ್ವಲ್, ರಕ್ಷಿತ್  ತರಬೇತಿಯ ಅನುಭವ ಹಂಚಿಕೊಂಡರು.






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close