ಪ್ರಜ್ವಲ್ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಮೊದಲನೆಯದಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಶೀಘ್ರದಲ್ಲೇ ಪ್ರಕಟ
ಪ್ರಜ್ವಲ್ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಮೊದಲನೆಯದಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಶೀಘ್ರದಲ್ಲೇ ಪ್ರಕಟ - webnews kannada
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಮಹತ್ವದ ತೀರ್ಪು ನೀಡಿದೆ. ಕೆ.ಆರ್. ನಗರದ ಸಂತ್ರಸ್ತೆ
ಕೆ.ಆರ್. ನಗರದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ Prajwal Revanna ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಈ ತೀರ್ಪನ್ನು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 2 ರಂದು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಕಳೆದ 14 ತಿಂಗಳುಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದಾಗಿದೆ. ಈ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು ಒಂಬತ್ತು ಆರೋಪಿಗಳಿದ್ದು, ಹೆಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ತೀರ್ಪು ಪ್ರಕಟಿಸುವಾಗ ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲೇ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ.