Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಂಡ್ಯ: ಯುವಕನ ಮೇಲೆ ಚಿರತೆ ಮಾರಣಾಂತಿಕ ದಾಳಿ; ಪ್ರಾಣಾಪಾಯದಿಂದ ಪಾರು

ಮಂಡ್ಯ: ಯುವಕನ ಮೇಲೆ ಚಿರತೆ ಮಾರಣಾಂತಿಕ ದಾಳಿ; ಪ್ರಾಣಾಪಾಯದಿಂದ ಪಾರು 



 

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮ ವ್ಯಾಪ್ತಿಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಯುವಕನೊಬ್ಬ ಚಿರತೆ ದಾಳಿಯಿಂದ ಗಾಯಗೊಂಡಿದ್ದಾನೆ. ಗ್ರಾಮದ ರೈತ ಸತೀಶ್ ಅವರ ಪುತ್ರ ಕಿರಣ್ ಚಿರತೆ ದಾಳಿಯಿಂದ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿರಣ್ ಮುಖ, ಕೈ ಮತ್ತು ಕಾಲುಗಳಲ್ಲಿ ಗಾಯಗಳಾಗಿವೆ. ಸೋಮವಾರ ರಾತ್ರಿ 8.30 ರಂದು ಕಿರಣ್ ತನ್ನ ಊರು ಕತ್ತರಘಟ್ಟದಿಂದ ಹತ್ತಿರದ ಬಂಡಿಹೊಳೆ ಗ್ರಾಮದಲ್ಲಿರುವ ತನ್ನ ಅಜ್ಜಿಯ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕತ್ತರಘಟ್ಟದ ಹೊರವಲಯದಲ್ಲಿ ಚಿರತೆ ದಾಳಿ ಮಾಡಿದೆ. ಇದರಿಂದ ಕಿರಣ್ ಬೈಕ್‌ನಿಂದ ಬಿದ್ದಿದ್ದಾನೆ. ಈ ವೇಳೆ ಕಿರಣ್ ಮೇಲೆ ದಾಳಿ ಮಾಡಿದ ಚಿರತೆ ದಾಳಿ ಮುಖ, ಕೈ ಮತ್ತು ಕಾಲುಗಳ ಮೇಲೆ ಪರಚಿ ಗಾಯ ಮಾಡಿದೆ. ಚಿರತೆ ದಾಳಿಯಿಂದ ಗಾಯಗೊಂಡ ಕಿರಣ್ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅದೃಷ್ಟವಶಾತ್, ಬೈಕ್ ಮೇಲೆ ಹಾರಿದ ಚಿರತೆ ಕೂಡ ಭಯಭೀತಗೊಂಡು ಓಡಿಹೋಯಿತು. ಪ್ರಜ್ಞೆ ಬಂದ ನಂತರ, ಕಿರಣ್ ತನ್ನ ಸ್ನೇಹಿತ ಸಾಗರ್‌ಗೆ ಕರೆ ಮಾಡಿ ಸಹಾಯ ಕೇಳಿದ್ದಾರೆ. ಗಾಯಗೊಂಡ ಕಿರಣ್‌ನನ್ನು ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಚಿಕಿತ್ಸೆ ನೀಡಲಾಯಿತು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close