Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮದುವೆ ಮಾತುಕತೆಗೆಂದು ಮನೆಗೆ ಕರೆದು ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸೈಲೆಂಟಾಗಿ ಸ್ಮಶಾನಕ್ಕೆ

ಮದುವೆ ಮಾತುಕತೆಗೆಂದು ಮನೆಗೆ ಕರೆದು ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸೈಲೆಂಟಾಗಿ ಸ್ಮಶಾನಕ್ಕೆ 

https://www.webnewskannada.com


 

ಸಂಗರೆಡ್ಡಿ, ಡಿಸೆಂಬರ್ 11: ಮಗಳನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಪೋಷಕರು ಎಂಜಿನಿಯರಿಂಗ್ ವಿದ್ಯಾರ್ಥಿ(Student)ಯನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದ ಸಂಗರೆಡ್ಡಿಯಲ್ಲಿ ನಡೆದಿದೆ. ಮದುವೆ ಮಾತುಕತೆಗೆಂದು ಮನೆಗೆ ಕರೆದು ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬ್ಯಾಟ್​ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ವಿದ್ಯಾರ್ಥಿಯ ಸಾವಿಗೆ ಕಾರಣವಾದ ಹಿಂಸಾತ್ಮಕ ದಾಳಿಗೂ ಮುನ್ನ ಯುವತಿಯ ಕುಟುಂಬ ಹಲವಾರು ಬಾರಿ ಎಚ್ಚರಿಕೆ ನೀಡಿತ್ತು, ಈ ಸಂಬಂಧಕ್ಕೆ ಅವರ ವಿರೋಧವಿತ್ತು.ಮೃತ ವಿದ್ಯಾರ್ಥಿ ಹೆಸರು ಜ್ಯೋತಿ ಶ್ರವಣ್ ಸಾಯಿ ಆತ ಮೈಸಮ್ಮಗುಡದ ಸೇಂಟ್ ಪೀಟರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಓದುತ್ತಿದ್ದ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ. ಆತ ಕುತುಬುಲ್ಲಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅಮೀನ್‌ಪುರ ಸರ್ಕಲ್ ಇನ್ಸ್‌ಪೆಕ್ಟರ್ ನರೇಶ್ ನೀಡಿರುವ ಮಾಹಿತಿಯ ಪ್ರಕಾರ, ಶ್ರವಣ್ ಬೀರಮ್‌ಗುಡದ ಇಸುಕಬಾವಿ ನಿವಾಸಿ 19 ವರ್ಷದ ಶ್ರೀಜಾ ಜೊತೆ ಸಂಬಂಧ ಹೊಂದಿದ್ದ. ಅವರ ಸಂಬಂಧಕ್ಕೆ ಶ್ರೀಜಾ ಅವರ ಕುಟುಂಬದಿಂದ ವಿರೋಧವಿತ್ತು. ಈ ಹಿಂದೆ ಅವರು ಹುಡುಗನಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಘಟನೆ ನಡೆದ ದಿನ, ಶ್ರೀಜಾಳ ಪೋಷಕರು ಶ್ರವಣ್ನನ್ನು ಮದುವೆಯ ಬಗ್ಗೆ ಚರ್ಚಿಸಬೇಕು ಬಾ ಎಂದು ಮನೆಗೆ ಕರೆಸಿಕೊಂಡಿದ್ದರು. ಆತ ಬರುತ್ತಿದ್ದಂತೆ ಕುಟುಂಬ ಸದಸ್ಯರು, ಶ್ರೀಜಾಳ ತಾಯಿ ಸೇರಿ, ಶ್ರವಣ್ ಮೇಲೆ ಹಠಾತ್ತನೆ ಹಲ್ಲೆ ನಡೆಸಿ ಕ್ರಿಕೆಟ್ ಬ್ಯಾಟ್‌ನಿಂದ ತೀವ್ರವಾಗಿ ಹೊಡೆದಿದ್ದಾರೆ. ಆತನ ತಲೆಗೆ ಗಾಯಗಳಾಗಿದ್ದು, ಕಾಲು ಮತ್ತು ಪಕ್ಕೆಲುಬುಗಳಿಗೆ ಮುರಿತಗಳಾಗಿತ್ತು. ನಂತರ ಅವನನ್ನು ಕುಕತ್ಪಲ್ಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close