Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!

ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು! 


 ಹುಲಿ 

 

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು ಮಧ್ಯಾಹ್ನದ ಊಟದ ಭಾಗವಾಗಿ ಮಕ್ಕಳಿಗೆ ಮೊಟ್ಟೆಗಳನ್ನು ನೀಡಲು ತಮ್ಮ ಜೇಬಿನಿಂದ ಹಣ ಖರ್ಚು ಮಾಡಿ ಮಕ್ಕಳಿಗೆ ನೀಡುತ್ತಿದ್ದಾರೆ. ಈ ಹಣ ಮರು ಪಾವತಿಯಾಗುವ ಬಗ್ಗೆ ಯಾವುದೇ ಭರವಸೆ ಇಲ್ಲದಿದ್ದರೂ ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ಹಣ ಖರ್ಚು ಮಾಡುತ್ತಿದ್ದಾರೆ. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಶಿಕ್ಷಕರೊಬ್ಬರು, ನಮ್ಮ ಶಾಲೆಯಲ್ಲಿ 560 ಮಕ್ಕಳಿದ್ದಾರೆ, ಅವರಲ್ಲಿ ಕನಿಷ್ಠ 400 ಮಕ್ಕಳು ಮೊಟ್ಟೆ ತಿನ್ನಲು ಆಯ್ಕೆ ಮಾಡುತ್ತಾರ, ಉಳಿದವರು ಬಾಳೆಹಣ್ಣು ತಿನ್ನಲು ಆಯ್ಕೆ ಮಾಡುತ್ತಾರೆ. ಕೆಲವೊಮ್ಮೆ, ಬಾಳೆಹಣ್ಣು ತಿನ್ನಲು ಇಷ್ಟಪಡುವವರು ಸಹ ಮೊಟ್ಟೆಗಳನ್ನು ಕೇಳುತ್ತಾರೆ. ಮಕ್ಕಳು ಹಾಗೆ ಮಾಡುವುದನ್ನು ನಾವು ತಡೆಯಲು ಸಾಧ್ಯವಿಲ್ಲ. ಸರ್ಕಾರವು ನಮಗೆ ಪ್ರತಿ ಮೊಟ್ಟೆಗೆ 6 ರೂ.ಗಳನ್ನು ನೀಡುತ್ತಿದೆ,  ಈ ವರ್ಷ ನನ್ನ ಸಂಬಳದಿಂದ 60,000 ರೂ. ಹೆಚ್ಚುವರಿಯಾಗಿ ಖರ್ಚು ಮಾಡಿದ್ದೇನೆ ಮತ್ತು ಅದನ್ನು ಮರುಪಾವತಿಸಲಾಗುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಈ ಹಿಂದೆ, ವಾರಕ್ಕೆ ಮೂರು ಬಾರಿ ಮೊಟ್ಟೆಗಳನ್ನು ನೀಡುವಂತೆ ಸೂಚಿಸಲಾಗಿತ್ತು, ಆದರೆ ಈಗ ಪ್ರತಿದಿನ ನೀಡುವಂತೆ ಹೇಳಿದ್ದಾರೆ. ಅದೇ ರೀತಿ, ಬಾಳೆಹಣ್ಣು ಖರೀದಿಸಲು ನಮಗೆ 6 ರೂ. ನೀಡಲಾಗುತ್ತದೆ ಮತ್ತು ಮಾರುಕಟ್ಟೆಯಲ್ಲಿನ ಬೆಲೆಯನ್ನು ಅವಲಂಬಿಸಿ, ನಾವು ವಿದ್ಯಾರ್ಥಿಗೆ ಎರಡು ಬಾಳೆಹಣ್ಣು ಅಥವಾ ಒಂದು ಬಾಳೆಹಣ್ಣನ್ನು ನೀಡುತ್ತೇವೆ. ಪ್ರಸ್ತುತ,  ನಾವು ಇದನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ, ಮಧ್ಯಾಹ್ನದ ಊಟದ ಪರಿಶೀಲನೆಗಾಗಿ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಬರುವ ಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ. ಇದಕ್ಕಾಗಿ ಈಗಾಗಲೇ ಬಜೆಟ್ ನಿಗದಿಪಡಿಸಲಾಗಿದೆ, ಇದನ್ನು ಈಗ ಹೆಚ್ಚಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಗಿದೆ. ಶಾಲೆಗಳಿಗೆ ಮೊಟ್ಟೆಗಳಿಗೆ ನೀಡುವ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ದಕ್ಷಿಣ ಕನ್ನಡದ ನಾಡಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮತ್ತೊಬ್ಬ ಶಿಕ್ಷಕರು ತಿಳಿಸಿದ್ದಾರೆ. ಆಗಸ್ಟ್ 2024 ರಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ ಮಧ್ಯಾಹ್ನದ ಊಟ ಕಾರ್ಯಕ್ರಮವನ್ನು ಬೆಂಬಲಿಸಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು. ಎಲ್‌ಕೆಜಿಯಿಂದ 10ನೇ ತರಗತಿಯವರೆಗಿನ ಸರ್ಕಾರಿ ಶಾಲೆಗಳಿಗೆ ಮೊಟ್ಟೆಗಳನ್ನು ಒದಗಿಸಲು ಅವರು ಮೂರು ವರ್ಷಗಳ ಕಾಲ 1,500 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣ ಆಯುಕ್ತ ವಿಕಾಸ್ ಕಿಶೋರ್ ಸುರಲ್ಕರ್ ಮಾತನಾಡಿ, ಶಿಕ್ಷಕರು ತಮ್ಮ ಜೇಬಿನಿಂದ ಹೆಚ್ಚುವರಿ ಖರ್ಚು ಮಾಡುವುದು ವಾಸ್ತವಿಕವಾಗಿ ಸರಿಯಾಗಿಲ್ಲದಿರಬಹುದು. ಮೊಟ್ಟೆ ಅಥವಾ ಬಾಳೆಹಣ್ಣಿನ ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ದರಗಳನ್ನು ಪರಿಷ್ಕರಿಸಲು ಇಲಾಖೆ ಚರ್ಚಿಸುತ್ತಿದೆ. ಒಮ್ಮೆ ಪರಿಷ್ಕರಿಸಿದ ನಂತರ, ಅದಕ್ಕಾಗಿ ಹಣವನ್ನು ಹಂಚಿಕೆ ಮಾಡಬಹುದು ಎಂದು ಹೇಳಿದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close