Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ

https://www.webnewskannada.com



 ಹುಲಿ 

 

ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್​ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರೂ ಸಾಥ್ ನೀಡಿದ್ದು, ಮಾಹಿತಿ ತಿಳಿದ ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ಕೊಲೆ ಮಾಡಿ ಅಗ್ನಿ ಅವಘಡವೆಂದು ಬಿಂಬಿಸಲು ಹೊರಟ ಆರೋಪಿಗಳು ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ. ಆತನ ಪ್ಲಾನ್ ಪ್ರಕಾರವೇ ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ್ ಎನ್ನುವವರಿಬ್ಬರೂ ನಾಗರತ್ನ ಒಬ್ಬರೇ ಇರುವ ಸಮಯ ನೋಡಿಕೊಂಡು ಮನೆಗೆ ಬಂದಿದ್ದರು. ಈ ವೇಳೆ ಮಹಿಳೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದರು. ಹಲ್ಲೆಯ ನಂತರ ಗ್ಯಾಸ್ ಸಿಲಿಂಡರ್‌ಗಳನ್ನು ಸೋರಿಕೆ ಮಾಡಿದ ಆರೋಪಿಗಳು , ಘಟನೆಯನ್ನಯ ಅಗ್ನಿ ಅವಘಡ ಎಂದು ಬಿಂಬಿಸಲು ಯತ್ನಿಸಿದ್ದರು. ಈ ವೇಳೆ ಮನೆಯ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಗಾಯಗೊಂಡ ನಾಗರತ್ನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ತನ್ನದೇ ಸ್ನೇಹಿತರಿಗೆ ಸುಪಾರಿ ಕೊಟ್ಟಿದ್ದ ಮಹೇಶ್ ಸೇರಿದಂತೆ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close