Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ 



ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಇಂದು ಶನಿವಾರ ನಿಧನರಾಗಿದ್ದಾರೆ. ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದ ಬೊಮ್ಮಯ್ಯ ಅವರು ನಿಧನ ಹೊಂದಿರುವುದು ಅವರ ಕುಟುಂಬ ವರ್ಗ ಮತ್ತು ಆತ್ಮೀಯ ಗೆಳೆಯರ ಬಳಗದಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.ನಿನ್ನೆಯಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಮೆಜೆಸ್ಟಿಕ್ ನಲ್ಲಿ ಬಸ್ಸಿನಿಂದ ಇಳಿದಾಗಲೇ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಬಸ್ಸಿನಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದವರಾದ ದೊಡ್ಡಬೊಮ್ಮಯ್ಯ, ಬೆಂಗಳೂರಿನಲ್ಲಿ ಸಂಜೆವಾಣಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಸಹ ಅರೆಕಾಲಿಕ ವೃತ್ತಿ ಮಾಡುತ್ತಿದ್ದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು.


 ಹುಲಿ 

 



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close