Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ವಿನಾಯಕ ಯುವಕ‌ ಮಂಡಲದಿಂದ ಗೋವಿಗಾಗಿ ಮೇವು ಕಾರ್ಯಕ್ರಮ

ಶ್ರೀ ವಿನಾಯಕ ಯುವಕ‌ ಮಂಡಲದಿಂದ ಗೋವಿಗಾಗಿ ಮೇವು ಕಾರ್ಯಕ್ರಮ 

https://www.webnewskannada.com

ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ‌) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸತತ 4 ನೇ ವರ್ಷದ ಗೋವಿಗಾಗಿ‌ ಮೇವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿರಿಯಾರ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಪ್ರದೀಪ್ ಬಲ್ಲಾಳ ಮಾತನಾಡಿ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ ಯುವಕ ಮಂಡಲವು ಅರ್ಥಪೂರ್ಣವಾದ ಕಾರ್ಯಕ್ರಮ ನಡೆಸಿದೆ. ಗೋವುಗಳ ಹಸಿವು ನೀಗಿಸುವಲ್ಲಿ ಇವರ ಶ್ರಮ ಶ್ಲಾಘನೀಯ ಎಂದರು. ಗೋವಿಗಾಗಿ ಮೇವು ಕಾರ್ಯಕ್ರಮದ ಸಂಚಾಲಕ ಶ್ರೀ ಪ್ರಥ್ವಿರಾಜ್ ಶೆಟ್ಟಿ ಮಾತನಾಡಿ ಶ್ರೀ ವಿನಾಯಕ ಮಂಡಲವು ಗೋವಿಗಾಗಿ ಮೇವು ಅಭಿಯಾನಕ್ಕೆ ಪ್ರತಿವರ್ಷ  ನೆರವಾಗಿ ಕಾರ್ಯಕ್ರಮ ಯಶಸ್ಸುಗೊಳಿಸುವಲ್ಲಿ ಸಹಕರಿಸುತ್ತಿದ್ದಾರೆ. ಯುವಕ‌ ಮಂಡಲ ನಿರಂತರ ಸಮಾಜಮುಖಿ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದರು.

ಈ ಸಂದರ್ಭದಲ್ಲಿ ನೂರ ಐವತ್ತು ಕ್ಕೂ ಮಿಕ್ಕಿ ಹುಲ್ಲಿನ‌ ಪಿಂಡಿಯನ್ನು ನೀಲಾವರ ಗೋ ಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ‌ ಮಂಡಲದ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ, ಕಾರ್ಯದರ್ಶಿ ಶ್ರೀ ಸುಧಾಕರ ನಾಯ್ಕ ಹಾಗೂ ಯುವಕ‌ ಮಂಡಲದ ಸದಸ್ಯರು ಉಪಸ್ಥಿತರಿದ್ದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close