Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ

ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ 



 ಹುಲಿ 

 

Webnewskananda: ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ಮ್ಯಾನೇಜರ್ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಎಸ್ ಎನ್ ಎಲ್ ಡೊಟ್ ಇದರ ನಿವೃತ್ತ ಮಹಾಪ್ರಭಂದಕರಾದ ಚಂದ್ರಶೇಖರ ಕಲ್ಕೂರ ಮಟಪಾಡಿ ಇವರಿಗೆ ಶಾಲೆಯ ಪರವಾಗಿ ಗೌರವಾರ್ಪಣೆ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ಪಿ, ಜನನಿ ಎಂಟರ್ ಪ್ರೈಸಸ್ ಇದರ ಆಳಿತ ಪಾಲುದಾರರಾದ ಪ್ರಶಾಂತ್ ಕಾಡೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ಇದರ ಯೋಜನಾಧಿಕಾರಿ ರಮೇಶ್ ಪಿ ಕೆ, ಭಾಗವಹಿಸಿದ್ದರು. ವಿಜಯ ಸೇವಾ ಪ್ರತಿಷ್ಠಾನ ಮಟಪಾಡಿ ಇದರ ಅಧ್ಯಕ್ಷರಾದ ಜಯರಾಮ ನಾಯರಿ ಅವರಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಪಬ್ಲಿಕ್ ಟಿವಿ ಉಡುಪಿ ಜಿಲ್ಲಾ ಛಾಯಾಗ್ರಾಹಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಚೇತನ್ ಜಿ. ಪೂಜಾರಿ ಸ್ವಸ್ತಿ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಶ್ರೀ ವಾಣಿ ವಿದ್ಯಾಭಿವೃದ್ಧಿ ಸಂಘ ನಡೂರು ಅಧ್ಯಕ್ಷರಾದ ಬಿ. ಭೋಜ ಹೆಗ್ಡೆ, ಶ್ರೀನಿಕೇತನ ಶಾಲಾಭಿವೃದ್ಧಿ ಟ್ರಸ್ಟ್ ಮಟಪಾಡಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಹಿರಿಯಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಶಿವರಾಮ ಶೆಟ್ಟಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಶ್ಯಾಮಲ, ವಿದ್ಯಾರ್ಥಿ ನಾಯಕರಾದ ಶಶಾಂಕ್ ಉಪಸ್ಥಿತರಿದ್ದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಶ್ಯಾಮಲ ವರದಿ ಮಂಡಿಸಿದರು. ಸನ್ಮಾನ ಪತ್ರವನ್ನು ಚಂದ್ರಶೇಖರ ಕಲ್ಕೂರ, ದಿವ್ಯಾ, ಜಯರಾಮ ನಾಯರಿ, ಸ್ನೇಹ, ಬಹುಮಾನ ವಿಜೇತರ ಪಟ್ಟಿಯನ್ನು ಪವಿತ್ರ, ರಜನಿ, ಜಯಲಕ್ಷ್ಮೀ, ಆಶಾ, ಸುಕನ್ಯಾ ವಾಚಿಸಿದರು. ಶಿವರಾಮ ಶೆಟ್ಟಿ ಸ್ವಾಗತಿಸಿ, ರತಿ ಧನ್ಯವಾದ ಸಲ್ಲಿಸಿದರು. ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close