Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ

ಫೇಸ್ಬುಕ್ ಗೆಳತಿಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ 

www.webnewskannada.com

Webnews kannada -ಮಡಿಕೇರಿ,  ಮಹಿಳೆಯೊಬ್ಬಳು ಕರೆದಿದ್ದಾಳೆಂದು ಮಡಿಕೇರಿಗೆ ಬಂದಿರುವ ಮಂಡ್ಯ ಜಿಲ್ಲೆ ಮದ್ದೂರಿನ ಮಹೇಶನಿಗೆ ನರಕದ ಅನುಭವ ಎದುರಾಗಿದೆ. ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿಯನ್ನು ಭೇಟಿಯಾಗಲು ಮಂಡ್ಯದಿಂದ ಮಡಿಕೇರಿಗೆ ಬಂದ ಯುವಕನನ್ನು, ಮನೆಯೊಂದರಲ್ಲಿ ಕೂಡಿಹಾಕಿ ಹಣಕ್ಕಾಗಿ ಹಲ್ಲೆ ನಡೆಸಲಾಗಿದೆ. ಹೇಗೋ ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಯುವಕ, ಓಡೋಡಿ ಬಂದು ಮಡಿಕೇರಿ‌ನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಇದೊಂದು ಹನಿಟ್ರ್ಯಾಪ್ ಜಾಲದ ಕೃತ್ಯವಿರಬಹುದೆಂದು ಪೊಲೀಸರು ಶಂಕಿ ವ್ಯಕ್ತಪಡಿಸಿದ್ದು, ತನಿಖೆ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹೇಶಗೆ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಯ ಆಹ್ವಾನದ ಮೇರೆಗೆ ಶುಕ್ರವಾರ ಸಂಜೆ ಮಡಿಕೇರಿಗೆ ಬಂದ ಮಹೇಶ, ಒಂಟಿಯಾಗಿ ಇದ್ದುದನ್ನು ಗಮನಿಸಿದ ಮಹಿಳೆ ಮಡಿಕೇರಿಯ ಮಂಗಳಾದೇವಿ ನಗರದ ಮನೆಯೊಂದಕ್ಕೆ ಕರೆಸಿಕೊಂಡಿದ್ದಾಳೆ.ಕೆಲಕಾಲ ಮಾತನಾಡಿ 

 ಅಚಾನಕ್ ಫೋನ್ ಕರೆ ಬಂದ ಕಾರಣ ಸಂಬಂಧಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಿ ಹೊರಟಿದ್ದಾಳೆ. ಅದೇ ಸಮಯದಲ್ಲಿ ರೂಮಿಗೆ ನುಗ್ಗಿದ ನಾಲ್ವರು ಯುವಕರು ಮಹೇಶ ಬಳಿ ಇದ್ದ ಹಣ ಹಾಗೂ ವಸ್ತುಗಳನ್ನು ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ.ಬಳಿಕ ಭಾರೀ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ. ಬಳಿಕ ಮೂತ್ರ ಮಾಡುತ್ತೇನೆಂದು ಹೇಳಿ ಗ್ಯಾಂಗ್ನಿಂದ ತಪ್ಪಿಸಿಕೊಂಡ ಮಹೇಶ್, ಮನೆಯಿಂದ ಹೊರಗೆ ಓಡಿಬಂದಿದ್ದಾನೆ. ಆದರೂ ಆರೋಪಿಗಳು ಆಟೋದಲ್ಲಿ ಅಪಹರಣಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾದ ಮಹೇಶ್, ಅರೆಬೆತ್ತಲಾಗಿ ಓಡಿಬಂದು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close