Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮೊದಲ ದಿನ ನವದಂಪತಿ ಜಾತ್ರೆ ಕೊಡಿ ಹಬ್ಬ ಜಾತ್ರೆಯ ವಿಶೇಷತೆ ಏನು?

ಮೊದಲ ದಿನ ನವದಂಪತಿ ಜಾತ್ರೆ ಕೊಡಿ ಹಬ್ಬ ಜಾತ್ರೆಯ ವಿಶೇಷತೆ ಏನು?

ಕರಾವಳಿಯ ಅತಿದೊಡ್ಡ ಜಾತ್ರೆ ಆರಂಭವಾಗಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಕೊಡಿ ಹಬ್ಬವೆಂದರೆ ಹಲವು ನಂಬಿಕೆಗಳ ಪ್ರತೀಕ. ಮದುವೆ ಆಗದವರಿಗೆ ಕೋಟಿಲಿಂಗೇಶ್ವರ ಅಭಯ ನೀಡುವ ದೇವರು. ನವದಂಪತಿಗಳಿಗೆ ಸುಖ ದಾಂಪತ್ಯದ ಕನಸು ಕಟ್ಟಿಕೊಡುವ ಕೇಂದ್ರ. ಇಲ್ಲಿನ ರಥೋತ್ಸವ ಅಂದರೆ ಅದ್ದೂರಿತನಕ್ಕೆ ಇನ್ನೊಂದು ಹೆಸರು.ಹೊಸದಾಗಿ ಮದುವೆಯಾದವರಿಗೆ ತಮ್ಮ ಸುಖ ದಾಂಪತ್ಯದ ಬಗ್ಗೆ ಸಾವಿರ ಕನಸುಗಳಿರುತ್ತವೆ. ಈ ಸನ್ನಿಧಿಯಲ್ಲಿ ದಾಂಪತ್ಯಗೀತೆ ಆರಂಭವಾದರೆ ಜೀವನ ಪೂರ್ಣ ಸುಖವಾಗಿರುತ್ತೆ ಅನ್ನೋದು ಜನರ ವಿಶ್ವಾಸ. ಹಾಗಂತಲೇ ನವ ದಂಪತಿ ಕುಂದಾಪುರದ ಕೋಟಿಲಿಂಗೇಶ್ವರ ದರ್ಶನಕ್ಕೆ ಬರುತ್ತಾರೆ.ಕೊಡಿ ಹಬ್ಬ ಕರಾವಳಿ-ಮಲೆನಾಡು ಭಾಗದ ಅತಿದೊಡ್ಡ ಹಬ್ಬ. 7 ದಿನಗಳ ಕಾಲ ನಡೆಯುವ ಈ ರಥೋತ್ಸವದಲ್ಲಿ ಮೊದಲ ದಿನ ನವದಂಪತಿಗಳ ಜಾತ್ರೆ ನಡೆಯುತ್ತೆ. ಹೊಸದಾಗಿ ಮದುವೆಯಾದ ದಂಪತಿ ಕೈಕೈಹಿಡಿದು ಬಂದು, ನೂರಾರು ಹರಕೆ ಹೊತ್ತು ದೇವರಿಗೆ ಕೈ ಮುಗಿಯುತ್ತಾರೆ. ಪುಷ್ಕರಣಿಗೆ ಪ್ರದಕ್ಷಿಣೆ ಹಾಕಿ ಸುತ್ತಲೂ ಅಕ್ಕಿ ಚೆಲ್ಲಿ ಹರಕೆ ತೀರಿಸುತ್ತಾರೆ. ಆ ಮೂಲಕ ಹೊಸ ಜೀವನ ಆರಂಭಿಸುತ್ತಾರೆ.ಸಂತಾನದ ಆಸೆ ಹೊತ್ತವರೇ ಹೆಚ್ಚು ಸಂಖ್ಯೆಯಲ್ಲಿ ಬರೋದ್ರಿಂದ ಇದನ್ನು ಕೊಡಿ ಹಬ್ಬ ಎಂದಲೂ ಕರೆಯಲಾಗುತ್ತದೆ. ಜಾತ್ರೆಗೆ ಬಂದವರೆಲ್ಲಾ ಕಬ್ಬಿನ ಜಲ್ಲೆ ತೆಗೆದುಕೊಂಡು ಹೋಗುವುದು ಇಲ್ಲಿನ ಪದ್ಧತಿ. ಕಬ್ಬಿನ ಜಲ್ಲೆಯ ಕೊಡಿ ತೆಗೆದುಕೊಂಡು ಹೋಗುವುದರಿಂದ ಇದನ್ನು ಕೊಡಿ ಹಬ್ಬವೆಂದು ಕರೆಯಲಾಗುತ್ತೆ. ಗಾತ್ರದಲ್ಲಿ ಅತಿದೊಡ್ಡದೆನಿಸಿದ ಬ್ರಹ್ಮರಥವನ್ನು ಭಕ್ತರೆಲ್ಲಾ ಸೇರಿ ಎಳೆಯುತ್ತಾರೆ. ಇಲ್ಲಿ ಶಿವ ಕೋಟಿ ಲಿಂಗ ಸ್ವರೂಪದಲ್ಲಿ ನೆಲೆ ನಿಂತಿದ್ದಾನೆ ಎನ್ನುವುದು ಜನರ ನಂಬಿಕೆ. ಗ್ರಾಮೀಣ ಜನರು ಕೊಡಿ ಹಬ್ಬಕ್ಕಾಗಿ ವರ್ಷವೆಲ್ಲಾ ಕಾಯ್ತಾರೆ. 7 ದಿನದ ಜಾತ್ರೆಯಲ್ಲಿ ನಿತ್ಯ ಪಾಲ್ಗೊಂಡು ಸಂಭ್ರಮಿಸುತ್ತಾರೆ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close