Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ok

ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ 


 ಹುಲಿ 

 

ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿಯವರಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಮಂತ್ರಣ ಬಿಡುಗಡೆ ಕೋಟ, ಡಿ.25: ಇಂದು ಸಮಾಜದ ಮೂರು ಅಂಗಗಳು ಜನರಲ್ಲಿ ನಂಬಿಕೆ ಕಳೆದುಕೊಂಡಿದೆ. ಹೀಗಾಗಿ ಸಮಾಜವನ್ನು ತಿದ್ದುವ ಹಾಗೂ ಪರಿವರ್ತನೆ ಮಾಡುವಲ್ಲಿ ಪತ್ರಿಕಾ ರಂಗದ ಬಗ್ಗೆ ಹೆಚ್ಚು ನಂಬಿಕೆ ಇದೆ. ಮಾಧ್ಯಮಗಳು ಈ ನಂಬಿಕೆಯನ್ನು ಉಳಿಸಿಕೊಳ್ಳುವ ಕಾರ‍್ಯ ಮಾಡಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿತಿಳಿಸಿದರು. ಅವರು ಬ್ರಹ್ಮಾವರ ಪತ್ರಕರ್ತರ ಸಂಘ ಆಶ್ರಯದಲ್ಲಿ ಜ.4ರಂದು ನಡೆಯಲಿರುವ ವಡ್ಡರ್ಸೆ ರಘುರಾಮ ಶೆಟ್ಟಿಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ.25ರಂದು ಬ್ರಹ್ಮಾವರದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ವಡ್ಡರ್ಸೆ ರಘುರಾಮ ಶೆಟ್ಟಿಯವರು ಪತ್ರಿಕಾರಂಗದಲ್ಲಿ ತನ್ನದೇ ಆದ ಮೌಲ್ಯವನ್ನು ಉಳಿಸಿಕೊಂಡವರು ಹಾಗೂ ಜೀವನದ ಕೊನೆತನಕ ಆ ಮೌಲ್ಯಗಳಿಗಾಗಿ ಹೋರಾಡಿದವರು. ಪತ್ರಕರ್ತರು ಎಷ್ಟೇ ಕಷ್ಟವಾದರು ತಮ್ಮ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದು ಹಾಗೂ ವಡ್ಡರ್ಸೆಯವರನ್ನು ನೆನಪಿನಲ್ಲಿಡುವ ಸಲುವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್‌ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ, ಪದಾಧಿಕಾರಿಗಳಾ ಚಂದ್ರಶೇಖರ್‌ ಬೀಜಾಡಿ, ಮೋಹನ್‌ ಉಡುಪ, ಪ್ರವೀಣ್‌ ಮುದ್ದೂರು, ನಾಗರಾಜ್‌ ಅಲ್ತಾರು, ಗಣೇಶ್‌ ಸಾಹೇಬ್ರಕಟ್ಟೆಮೊದಲಾದವರಿದ್ದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close