Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೊಪ್ಪಳ : ಪ್ರೀವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಅಪಘಾತ; ನವಜೋಡಿ ಸಾವು

ಕೊಪ್ಪಳ : ಪ್ರೀವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಅಪಘಾತ; ನವಜೋಡಿ ಸಾವು! 

https://www.webnewskannada.com


 

ಗಂಗಾವತಿ : ಇನ್ನೇನು ಹಸೆಮಣೆಗೆ ಕಾಲಿಡುವ ಕನಸಿನಲ್ಲಿದ್ದ ಜೋಡಿಯೊಂದು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಇಂತಹದ್ದೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಕುಟುಂಬದವರ ಜೊತೆ ಈ ವಿಚಾರ ಕೇಳಿದವರಿಗೂ ಮನವೂ ಕಲಕದೇ ಇರದು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ

 (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ.ಮದುವೆ ನಿಶ್ಚಯವಾಗಿತ್ತು ಇವರು 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ. 21 ರಂದು ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬದಲ್ಲಿ ಮದುವೆ ತಯಾರಿಯೂ ನಡೆದಿತ್ತು. ಇವರಿಬ್ಬರೂ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆಗೆ ಹೋಗಿ ವಾಪಸ್ ಬರುತ್ತಿದ್ದರು. ಕವಿತಾರನ್ನು ಗಂಗಾವತಿಯಲ್ಲಿರುವ ಅವರ

ಮನೆಗೆ ಬಿಟ್ಟು ಹೋಗಲು ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿ ಬೈಕ್ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರಿಯಪ್ಪ ತೀವ್ರವಾಗಿ ಗಾಯಗೊಂಡಿದ್ದರು. ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close