ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್ನಲ್ಲೇ ನಡೆಯಿತು ದೊಡ್ಡ ಜಗಳ
ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್ನಲ್ಲೇ ನಡೆಯಿತು ದೊಡ್ಡ ಜಗಳ
ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.
ದರ್ಶನ್ ಜೊತೆ ಯಾರ್ಯಾರು ಇದ್ದಾರೆ?
ದರ್ಶನ್ ಜೊತೆ ಒಂದೇ ಸೆಲ್‌ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ದೊಡ್ಡ ಜಗಳ
ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ
ಇದನ್ನೂ ಓದಿ: ಹೆತ್ತವರು ಕಾಲು ಹಿಡಿದರೂ ಪ್ರಿಯಕರನನ್ನು ಬಿಡದ ಮಗಳು, ಮದುವೆ ಬಳಿಕ ಎಸ್ಪಿ ಕಚೇರಿಯಲ್ಲೇ ಒಂದಾದ ಪ್ರೇಮಿಗಳು!
ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ. ದರ್ಶನ್ ಜೊತೆ ಯಾರ್ಯಾರು ಇದ್ದಾರೆ? ದರ್ಶನ್ ಜೊತೆ ಒಂದೇ ಸೆಲ್‌ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ದೊಡ್ಡ ಜಗಳ ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ

