Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಗಣಿಗಾರಿಕೆ ವಿಷಯದಲ್ಲಿ ಕೊರಗರ ಮೇಲೆ ದೌರ್ಜನ್ಯ ಆರೋಪ; ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ

ಗಣಿಗಾರಿಕೆ ವಿಷಯದಲ್ಲಿ ಕೊರಗರ ಮೇಲೆ ದೌರ್ಜನ್ಯ ಆರೋಪ; ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ  

https://www.webnewskannada.com


 

ಕೋಟ, ಡಿ.8: ಕೊರಗ ಕುಟುಂಬಗಳು ಹಲವು ದಶಕದಿಂದ ನಡೆಸಿಕೊಂಡು ಬಂದ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆಯನ್ನು ಅನ್ಯರು‌ ಕಬಳಿಸಲು ಪ್ರಥ್ನಿಸುತ್ತಿದ್ದು ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ,‌ ಗರಿಕೆಮಠ, ಅಚ್ಲಾಡಿಯ ಕೊರಗ ಕುಟುಂಬಗಳು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಸಹಕಾರದಲ್ಲಿ ಬ್ರಹ್ಮಾವರ ತಹಶಿಲ್ದಾರ್ ಕಚೇರಿ ಎದುರು ಡಿ.8 ರಂದು ಪ್ರತಿಭಟನೆ ನಡೆಸಿತು. ಈ‌ ಸಂದರ್ಭ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸುಜಾತ ಮಾತನಾಡಿ, ಉಡುಪಿ ಜಿಲ್ಲೆಯ ಯಡ್ತಾಡಿ ಗ್ರಾಮದ ಸರ್ವೆ ನಂಬರ್ 145 ರಲ್ಲಿ 1.84 ಎಕ್ರೆ ಜಾಗದಲ್ಲಿ ಪರಿಶಿಷ್ಠ ಪಂಗಡದ ರಮಣಿ, ನರ್ಸಿ, ಐತ, ಚಂದ್ರ,ಭಾಸ್ಕ ಅವರು ಪಾರಂಪರಿಕವಾಗಿ ಕಟ್ಟಡ ಕಲ್ಲು ಗಣಿಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಸದ್ರಿ ಜಾಗದಲ್ಲಿ ಮನೆಯನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಇದೀಗ ಈ ಜಾಗದಲ್ಲಿ ಕಟ್ಟಡಕಲ್ಲು ಎತ್ತೆಚ್ಚವಾಗಿ ಸಿಗುವುದ್ದರಿಂದ ಸ್ಥಳೀಯ ಒಂದಷ್ಟು ಮಂದಿ ರಾಜಕೀಯ ಪ್ರಭಾವ ಬಳಸಿ ಆ ಜಾಗವನ್ನು ತಮ್ಮದಾಗಿಸಲು ಪ್ರಯತ್ನ ಮಾಡುತ್ತಿದ್ದಾರೆ ಹಾಗೂ ಸರಕಾರಕ್ಕೆ ಕಲ್ಲು ಕೋರೆಯ ಪರವಾನಿಗೆ ಅರ್ಜಿಯನ್ನು ಸಲ್ಲಿಸುತ್ತಾರೆ. ಹೀಗಾಗಿ ಇವರಿಗೆ ಈ ಜಾಗದಲ್ಲಿ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ಮಾಡಿಕೊಟ್ಟರೆ ಮೂಲ ನಿವಾಸಿಗಳಾದ ನಮಗೆ ಅನ್ಯಾಯವಾಗುತ್ತದೆ. ಜಿಲ್ಲಾಧಿಕಾರಿ ಯಾವುದೇ ಕಾರಣಕ್ಕೂ ಅವರಿಗೆ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ನೀಡಬಾರದು ಎಂದರು. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಮಾತನಾಡಿ, ಕೊರಗ ಸಮಾಜದ ಮೇಲೆ ಬಲಾಢ್ಯರು, ರಾಜಕೀಯ ಪ್ರಾಬಲ್ಯರಿಂದ‌ ನಿರಂತರ ದಾಳಿ, ದೌರ್ಜನ್ಯ ನಡೆಯುತ್ತಿದೆ. ಅದರ ಮುಂದುವರಿದ ಭಾಗ ಎನ್ನುವಂತೆ ಇದೀಗ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆ ಕಾರ್ಮಿಕರನ್ನ ಒಕ್ಕಲೆಬ್ಬುವ‌ಹುನ್ನಾರ ಗರಿಕೆಮಠದಲ್ಲಿ ನಡೆಯುತ್ತಿದೆ. ಪ್ರಭಾವಗಳಿಗೆ ಮಣಿದು ಕೊರಗ ಕುಟುಂಬ ಹೊರತುಪಡಿಸಿ ಇತರರಿಗೆ ಪರವಾನಿಗೆ ನೀಡಿದಲ್ಲಿ ಅಮರಣಾಂತ ಉಪವಾಸ ನಡೆಸಲಾಗುವುದು ಎಂದರು. ಪ್ರತಿಭಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ಭೇಟಿ ನೀಡಿ ಮಾತುಕತೆ ನಢಸಿದರು. ಈ ಸಂದರ್ಭ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕಾರ್ಯದರ್ಶಿ ಸುಜಾತ ಹಾಗೂ ಕೊರಗ ಸಮಾಜದ ಪ್ರಮುಖರಾದ ಬೋಗ್ರ ಕೊಕ್ಕರ್ಣೆ, ಶೀನ ಕೊರಗ ಇನ್ನಾ, ದಿವಾಕರ ಕಳ್ತೂರು, ವೆಂಕಟೇಶ ಮಧುವನ, ಸಂತ್ರಸ್ತರಾದ ರಮಣಿ, ಚಂದ್ರ, ನರ್ಸಿ, ಮಂಜುಳ ಮತ್ತಿತ್ತರ ಉಪಸ್ಥಿತರಿದ್ದರು. ಗಣುಗಾರಿಕೆ ಇಲಾಖೆ ಅಧಿಕಾರಿ ಭೇಟಿ; ಮನವೊಲಿಕೆ:- ಪ್ರತಿಭಟನಾ ಸ್ಥಳಕ್ಕೆ ಉಡುಪಿ ಇಲಾಖೆಯ ಅಧಿಕಾರಿ ಹಾಜೀರ ಭೇಟಿ ನೀಡಿ ಮಾತುಕತೆ ನಡೆಸಿದರು. ನೀವು ನೀಡಿರುವ ಆಕ್ಷೇಪಣೆ ಕುರಿತು ಈಗಾಗಲೇ ತಹಶಿಲ್ದಾರರ ಮೂಲಕ ವರದಿ ಪಡೆದಿದ್ದು ನಿಮ್ಮ ಹೇಳಿಕೆ ದಾಖಲಿಸಲಾಗಿದೆ ಹಾಗೂ ವಸ್ತುಸ್ಥಿತಿ ಬಗ್ಗೆ ಕೂಡ ಉಲ್ಲೇಖ ಮಾಡಲಾಗಿದೆ. ಮುಂದೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಜತೆಗೆ ಮೂಲ ನಿವಾಸಿಗಳಾದರೂ ಕೂಡ ಅರ್ಜಿ ಹಾಕಿ,‌ಪರವಾನಿಗೆ ಪಡೆದೇ ಗಣಿಗಾರಿಕೆ ನಡೆಸಬೇಕು.‌ಹೀಗಾಗಿ ಕೊರಗ ಕುಟುಂಬಗಳು ಕೂಡ ಅರ್ಜಿ ಸಲ್ಲಿಸಲಿ ಎಂದರು ಹಾಗೂ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close