Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ.

ಬೆಂಗಳೂರು: ಜಿಎಸ್'ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್'ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ ಜಿಎಸ್'ಟಿ ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ ಎಂದು ಹೇಳಿದ್ದಾರೆ. ನ.2025-26ರಲ್ಲಿ ಜಿಎಸ್'ಟಿ ಸಂಗ್ರಹದಲ್ಲಿ ಶೇ.2ರಷ್ಟು ಕುಸಿತ ದಾಖಲಾಗಿದೆ. ಕಳೆದ ವರ್ಷ ನವೆಂಬರ್ 2024ರಲ್ಲಿ ಜಿಎಸ್'ಟಿ ಶೇ.9.3 ಬೆಳವಣಿಗೆ ಆಗಿತ್ತು. ನಿವ್ವಳ ದೇಶೀಯ ಜಿಎಸ್'ಟಿ ಬೆಳವಣಿಗೆ ದರ ಇಳಿಕೆಯಾಗಿದೆ. ದರ ಸರಳೀಕರಣ ಬಳಿಕ 3 ತಿಂಗಳಲ್ಲಿ ಶೇ.1.7 ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.8.9 ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ರಾಜ್ಯದ ನಿವ್ವಳ ಜಿಎಸ್'ಟಿ ಸಂಗ್ರಹಣೆಯಲ್ಲಿ ಶೇ.3.1 ಬೆಳವಣಿಗೆ ಹೊಂದಿದ್ದು, ರಾಜ್ಯದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟದ ಭೀತಿ ಎದುರಾಗಿದೆ. ಈ ವರ್ಷ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆಗೆ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close